![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ರಾಮಕುಂಜ: ಶ್ರೀ ರಾಮಕುಂಜೇಶ್ವರ ಕಿಂಡರ್ಗಾರ್ಟನ್ನಲ್ಲಿ ದೀಪಾವಳಿ ಹಬ್ಬವನ್ನು ಪುಟಾಣಿ ಮಕ್ಕಳೊಂದಿಗೆ ಅ.೨೭ರಂದು ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ದೀಪಾವಳಿ ಹಬ್ಬದ ಬಗ್ಗೆ ಮಕ್ಕಳಿಗೆ ತಿಳಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ, ಮುಖ್ಯಗುರುಗಳು, ಶಿಕ್ಷಕಿಯರು, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಕ್ಕಳು ಹಾನಿಕಾರಕವಲ್ಲದ ಪಟಾಕಿ ಸಿಡಿಸಿ ಸಂಭ್ರಮಿಸಿದರು.