ರಾಮಕುಂಜ ಆ.ಮಾ.ಶಾಲೆಯಲ್ಲಿ ಕೋಟಿ ಕಂಠ ಗಾಯನ

0

ರಾಮಕುಂಜ: ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರದ ವತಿಯಿಂದ ಆಯೋಜಿಸಲಾದ ಕೋಟಿ ಕಂಠ ಗಾಯನ ಕಾರ್ಯಕ್ರಮ ಅ.೨೮ರಂದು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಜರಗಿತು.

ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಚಾಲನೆ ನೀಡಿ ಮಾತನಾಡಿ, ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವ ಅವಶ್ಯಕತೆಯನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಜೈ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಹಚ್ಚೇವು ಕನ್ನಡದ ದೀಪ, ಬಾರಿಸು ಕನ್ನಡ ಡಿಂಡಿಮವ, ವಿಶ್ವ ವಿನೂತನ ವಿದ್ಯಾಚೇತನ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡುಗಳನ್ನು ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಲೋಹಿತ, ವ್ಯವಸ್ಥಾಪಕ ರಮೇಶ್ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here