ಶಾಲೆಗಳಲ್ಲಿ ಬ್ಯಾಗ್ ರಹಿತ ದಿನ ಆಚರಣೆ-ಮಾರ್ಗಸೂಚಿ ಬಿಡುಗಡೆ

0

ಬೆಂಗಳೂರು: ಶಾಲೆಗಳಲ್ಲಿ ಪ್ರತಿ ತಿಂಗಳ ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನಾಗಿ (Bagless Day)ಆಚರಿಸುವಂತೆ ಘೋಷಣೆ ಮಾಡಲಾಗಿದ್ದು ಈ ಸಂಬಂಧ ವಿದ್ಯಾರ್ಥಿ ಚಟುವಟಿಕೆ ಪುಸ್ತಕಗಳು ಹಾಗೂ ಶಿಕ್ಷಕರ ಕೈಪಿಡಿಗಳನ್ನು ವೆಬ್‌ಸೈಟ್‌ನಲ್ಲಿ ಅಳವಡಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ಸುತ್ತೊಲೆ ಹೊರಡಿಸಿದ್ದಾರೆ.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದಂದು ಸಂಭ್ರಮ ಶನಿವಾರ-ಬ್ಯಾಗ್ ರಹಿತ ದಿನ ಆಚರಿಸಲು ಸೂಚಿಸಲಾಗಿದೆ. ಬ್ಯಾಗ್ ರಹಿತ ದಿನದಂದು ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗಾಗಿ ವಿವಿಧ ೧೦ ವಿಷಯಗಳಲ್ಲಿ ಸ್ವಯಂ ವಿವರಣಾತ್ಮಕ ಚಿತ್ರ ಸಹಿತ ಚಟುವಟಿಕೆ ಪುಸ್ತಕಗಳನ್ನು ಹಾಗೂ ಅವುಗಳನ್ನು ತರಗತಿಗಳಲ್ಲಿ ನಿರ್ವಹಿಸಲು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಕಲಿಕಾ ಚೇತರಿಕೆ ಉಪಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಲ್ಲಿ ಅನ್ವಯಿಕ ಕಲಿಕಾ ಮನೋಭಾವವನ್ನು ಪ್ರೋತ್ಸಾಹಿಸುವಂತೆ ಕಲಿಕಾ ಹಾಲೆಗಳಲ್ಲಿ ಚಟುವಟಿಕೆ ನೀಡಲಾಗಿದೆ. ಈ ಕಲಿಕಾ ಹಾಲೆಗಳಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿ ಸಂಭ್ರಮ ಶನಿವಾರ ಚಟುವಟಿಕಾ ಪುಸ್ತಕಗಳನ್ನು ರೂಪಿಸಿರುವುದರಿಂದ ಪ್ರತಿ ತಿಂಗಳಲ್ಲಿ ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನು ಆಚರಿಸುವುದು. ವಿಶೇಷವಾಗಿ ಮಾಸಿಕ ಸಮಾಲೋಚನಾ ಸಭೆಗಳು ನಡೆಯುವ ದಿನಗಳಂದು ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆಯಿರುವ ಸಂದರ್ಭದಲ್ಲಿ ಈ ಸಾಹಿತ್ಯವನ್ನು ಬಳಸಿಕೊಂಡು ಸಂಭ್ರಮ ಶನಿವಾರ ಆಚರಿಸಬಹುದು. ಈ ಸಂಬಂಧ ವಿದ್ಯಾರ್ಥಿ ಚಟುವಟಿಕೆ ಪುಸ್ತಕಗಳನ್ನು ಹಾಗೂ ಶಿಕ್ಷಕರ ಕೈಪಿಡಿಯನ್ನು ಆSಇಖಖಿ ವೆಬ್‌ಸೈಟ್‌ನಲ್ಲಿ https://dsert.kar.nic.in ಜಾಲತಾಣಕ್ಕೆ ಭೇಟಿ ನೀಡಿ, ಡೌನ್‌ಲೋಡ್ ಮಾಡಿಕೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here