ಶಿರಾಡಿ ಗ್ರಾ.ಪಂ.ಪಿಡಿಒ ವೆಂಕಟೇಶ್‌ಗೆ ತೆಕ್ಕಾರು ಗ್ರಾ.ಪಂ.ಗೆ ವರ್ಗಾವಣೆ

0

ನೆಲ್ಯಾಡಿ: ಶಿರಾಡಿ ಗ್ರಾ.ಪಂ.ಪಿಡಿಒ ವೆಂಕಟೇಶ್ ಪಿ.,ರವರ್‍ನು ತೆಕ್ಕಾರು ಗ್ರಾಮ ಪಂಚಾಯಿತಿಗೆ ವರ್ಗಾವಣೆಗೊಳಿಸಿ ಕರ್ನಾಟಕ ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರು ಆಡಳಿತ-2ರವರು ಅ.18ರಂದು ಆದೇಶಿಸಿದ್ದಾರೆ.

ಈ ಆದೇಶದಂತೆ ಪಿಡಿಒ ವೆಂಕಟೇಶ್ ಪಿ.ಅವರನ್ನು ಶಿರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ಕರ್ತವ್ಯದಿಂದ ಅ.29ರಂದು ಬಿಡುಗಡೆಗೊಳಿಸಿ ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯವರು ಆದೇಶಿಸಿದ್ದಾರೆ. ಇವರಿಂದ ತೆರವಾದ ಸ್ಥಾನಕ್ಕೆ ಕೌಕ್ರಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್.ರವರನ್ನು ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ನೇಮಕಗೊಳಿಸಿ ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯವರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here