




ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರಿನಿಂದ 6 ಕಿ.ಮೀ ದೂರದಲ್ಲಿ ಆರ್ಯಾಪು ಗ್ರಾಮದ ಕೂರೇಲು ಮಣ್ಣಿನಲ್ಲಿ ನೆಲೆಯಾಗಿರುವ ಶ್ರೀ ಪೂಮಾಣಿ ಕಿನ್ನಿಮಾಣಿ ಉಳ್ಳಾಲ್ತಿ ರಾಜನ್ ದೈವಗಳ ದೈವಸ್ಥಾನದಲ್ಲಿ ಶ್ರೀ ದೈವಗಳ ವಿಜೃಂಭಣೆಯ ನೇಮೋತ್ಸವವು ನ.10 ರಂದು ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.









ಸುಮಾರು 800 ವರ್ಷಗಳ ದೀರ್ಘ ಇತಿಹಾಸವಿರುವ ಶ್ರೀ ದೈವಗಳಿಗೆ ದೈವಸ್ಥಾನ ನಿರ್ಮಿಸಿ 2014 ಮಾರ್ಚ್ 17 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆದಿದೆ. ಇದೀಗ 8 ವರ್ಷಗಳ ಬಳಿಕ ಶ್ರೀ ದೈವಗಳಿಗೆ ನೇಮೋತ್ಸವ ನಡೆಯುತ್ತಿದೆ. ಕೂರೇಲು ಮಣ್ಣಿನಲ್ಲಿ ಶ್ರೀ ದೈವಗಳಿಗೆ ಇದುವರೆಗೆ ನೇಮೋತ್ಸವ ನಡೆದ ಬಗ್ಗೆ ಯಾವುದೇ ಉಲ್ಲೇಖವಿಲ್ಲ, ದೀರ್ಘ ಇತಿಹಾಸದ ಬಳಿಕ ಇದೇ ಮೊದಲ ಬಾರಿಗೆ ನೇಮೋತ್ಸವ ನಡೆಯುತ್ತಿದೆ.
ಬೆಳಿಗ್ಗೆ ದೇವತಾ ಪ್ರಾರ್ಥನೆ,ಸ್ವಸ್ತಿ ಪುಣ್ಯಹವಾಚನ, ಸ್ಥಳ ಶುದ್ಧಿ, ಗಣಪತಿ ಹೋಮ, ದೈವಗಳಿಗೆ ಕಲಶ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆದು 9.30 ರಿಂದ ಶ್ರೀ ಉಳ್ಳಾಲ್ತಿ ದೈವದ ನೇಮೋತ್ಸವ ಆರಂಭಗೊಳ್ಳಲಿದೆ. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಬಳಿಕ ಶ್ರೀ ಪೂಮಾಣಿ ಕಿನ್ನಿಮಾಣಿ ದೈವಗಳ ನೇಮೋತ್ಸವ ನಡೆದು ಪ್ರಸಾದ ವಿತರಣೆ ನಡೆಯಲಿದೆ. ಸಂಜೆ ಶ್ರೀ ಕಲ್ಲುರ್ಟಿ ದೈವದ ನೇಮೋತ್ಸವ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೈವಗಳ ಕೃಪೆಗೆ ಪಾತ್ರರಾಗುವಂತೆ ಶ್ರೀ ದೈವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಆಡಳಿತ ಮೊಕ್ತೇಸರ ಮೊಬೈಲ್ ಸಂಖ್ಯೆ 9448153055 ಗೆ ಸಂಪರ್ಕಿಸಬಹುದಾಗಿದೆ.








