ಒಳಮೊಗ್ರು ಗ್ರಾಪಂನಿಂದ ತೆರಿಗೆ ಪರಿಷ್ಕರಣೆ; ಸಾರ್ವಜನಿಕರ ಸಲಹೆಗಳಿಗೆ ಅವಕಾಶ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಟ್ಟಡಗಳಿಗೆ ವಿಧಿಸುವ ತೆರಿಗೆಯ ದರ ಮತ್ತು ಗ್ರಾಮ ಪಂಚಾಯತ್‌ನಿಂದ ನೀಡುತ್ತಿರುವ ಲೈಸನ್ಸ್ ಮತ್ತು ಇನ್ನಿತರ ಮೂಲಭೂತ ಸೇವೆಗಳ ದರ ಮತ್ತು ಶುಲ್ಕಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಅಧಿನಿಯಮ 1993, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತ್‌ಗಳ ತೆರಿಗೆ, ದರ ಮತ್ತು ಫೀಜುಗಳ)ನಿಯಮಗಳು 2021ರಂತೆ ಪರಿಷ್ಕರಿಸಲಾಗಿದ್ದು, ಪರಿಷ್ಕೃತ ದರಗಳನ್ನು ಗ್ರಾಮ ಪಂಚಾಯತ್ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಗ್ರಾಮಸ್ಥರಿಂದ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಲಿಖಿತವಾಗಿ ನ.29 ರೊಳಗೆ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ. ಮೇಲಿನ ದಿನಾಂಕದ ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷೆ ಸುಂದರಿರವರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here