ಸಂಪ್ಯ: ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

0

ಸಂಪ್ಯ: ಸಂಪ್ಯ ಅಂಗನವಾಡಿ ಕೇಂದ್ರದ ವತಿಯಿಂದ ಮಕ್ಕಳ ದಿನ ಆಚರಣೆಯು ನ.14 ರಂದು ಸ್ತ್ರೀ ಶಕ್ತಿ ಸಭಾಭವನದಲ್ಲಿ ಜರಗಿತು.


ಕಾರ್ಯಕ್ರಮವನ್ನು ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಸುರೇಶ್ ಪುತ್ತೂರಾಯ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಚಿಕ್ಕಪ್ರಾಯದಲ್ಲೇ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಅವರನ್ನು ಸಮಾಜದಲ್ಲಿ ಸುಸಂಸ್ಕೃತರನ್ನಾಗಿ ಮಾಡುವ ಜವಬ್ದಾರಿ ಹೆತ್ತವರ ಹಾಗೂ ಶಿಕ್ಷರದ್ದಾಗಿದೆ ಎಂದು ತಿಳಿಸಿದರು.

ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸಂಪ್ಯ ಉದಯಗಿರಿ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಪ್ರೀತಂ ಪುತ್ತೂರಾಯ, ಅಕ್ಷಯ ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ, ಅಂಗನವಾಡಿ ಮೇಲ್ವಚಾರಕಿ ಜಲಜಾಕ್ಷಿ ಶುಭ ಹಾರೈಸಿದರು.

ಆರ್ಯಾಪು ಗ್ರಾ.ಪಂ. ಮಾಜಿ ಸದಸ್ಯ ಅಬ್ದುಲ್ ಜಬ್ಬಾರ್, ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಲಕ್ಷ್ಮಣ್ ಬೈಲಾಡಿ, ಉದ್ಯಮಿ ಭೀಮಯ್ಯ ಭಟ್, ಸಾಮಾಜಿಕ ಕಾರ್ಯಕರ್ತ ಉಮೇಶ್ ಆಚಾರ್ಯ ಕುಕ್ಕಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ನಡೆಸಲಾದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ದೀಪ್ತಿ ಪ್ರಾರ್ಥಿಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಜಯಶ್ರೀ ಸ್ವಾಗತಿಸಿ, ಅಂಗನವಾಡಿ ಶಿಕ್ಷಕಿ ಲಿರಿಷ್ಯಾ ವಂದಿಸಿದರು. ಸಭೆಯ ಬಳಿಕ ಅಂಗನವಾಡಿ ಮಕ್ಕಳಿಂದ ಹಾಗೂ ಸ್ತ್ರೀ ಶಕ್ತಿ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಹ ಭೋಜನ ನಡೆಯಿತು. ಅಂಗನವಾಡಿ ಸಹಾಯಕಿ ನೇತ್ರಾವತಿ, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು, ಮಕ್ಕಳ ಹೆತ್ತವರು ಸಹಕರಿಸಿದರು

LEAVE A REPLY

Please enter your comment!
Please enter your name here