ನೆಟ್ಟಣಿಗೆ ಮುಡ್ನೂರು: ಗ್ರಾಮದ ನೆಲ್ಲಿತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನೆ. ಮೂಡ್ನೂರು ಗ್ರಾ.ಪಂ.ಅಧ್ಯಕ್ಷ ರಮೇಶ್ ರೈ ಸಾಂತ್ಯ ದೀಪ ಬೆಳಗಿಸಿ ಮಕ್ಕಳ ಭವಿಷ್ಯವು ಉಜ್ವಲವಾಗಲಿ ಎಂದು ಶುಭಹಾರೈಸಿದರು.
ಮಕ್ಕಳ ವಿವಿಧ ಮನೋರಂಜನಾ ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಿಹಿತಿಂಡಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಸವಿತಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ ಆಶಾಕಾರ್ಯಕರ್ತೆ ವೇದಾವತಿ, ಸ್ತ್ರೀಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಕಾರ್ಯಕರ್ತೆ ಸಾವಿತ್ರಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ಸೀತಮ್ಮ ಸಹಕರಿಸಿದರು.