





ಪುತ್ತೂರು:ಹರಿಯಾಣದ ಕುರುಕ್ಷೇತ್ರದಲ್ಲಿ ನವೆಂಬರ್ 19 ರಿಂದ 23 ರವರೆಗೆ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರಜತ್ ಆರ್ ಭಟ್ ಕಂಚಿನ ಪದಕವನ್ನುಪಡೆದುಕೊಂಡಿದ್ದಾರೆ.


ಈವರು ವಿಟ್ಲದ ರಾಜೇಶ್ ಭಟ್ ಮತ್ತು ರಾಧಿಕಾ ಭಟ್ ದಂಪತಿ ಪುತ್ರ.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಇವರು ತರಬೇತಿಯನ್ನು ಪಡೆದಿರುತ್ತಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತುಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.













