ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ನೂತನ ಸದಸ್ಯರುಗಳಾಗಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಹಾಗೂ ಎಂ.ಎಸ್.ಮಹಮ್ಮದ್ ರವರು ಆಯ್ಕೆಗೊಂಡಿದ್ದಾರೆ.
ಪ್ರಸಾದ್ ಕೌಶಲ್ ಶೆಟ್ಟಿರವರು ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ, ರಾಮಕೃಷ್ಣ ಕ್ರೆಡಿಟ್ ಕೋಆಪರೇಟಿವ್ನ ನಿರ್ದೇಶಕರಾಗಿ, ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ ಉಪಾದ್ಯಕ್ಷರಾಗಿ, ಬೆಳ್ಳಿಪ್ಪಾಡಿ ಶ್ರೀಸಕಲೇಶ್ವರ ಪಂಚಲಿಂಗೇಶ್ವರ ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಕೊಂಬೆಟ್ಟು ನಿವಾಸಿಯಾಗಿದ್ದಾರೆ.
ಎಂ.ಎಸ್.ಮಹಮ್ಮದ್ರವರು ಕೆಪಿಸಿಸಿ ಕಾರ್ಯದರ್ಶಿಯಾಗಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಕೊಳ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ, ಸೇವೆ ಸಲ್ಲಿಸಿದ್ದರು. ಇವರು ಪುಣಚ ಗ್ರಾಮದ ಮಣಿಲ ನಿವಾಸಿಯಾಗಿದ್ದಾರೆ.