ಕಾಣಿಯೂರು: ನಾಣಿಲ ಸ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ವಸಂತ ದಲಾರಿ ವಹಿಸಿಕೊಂಡು ಮಾತನಾಡಿ, ಶಾಲಾಭಿವೃದ್ಧಿಗೆ ಕೈ ಜೋಡಿಸುವಂತೆ ಪೋಷಕರಿಗೆ ಕರೆ ಕೊಟ್ಟರು.ಮಾರ್ಗದರ್ಶಕಿ ಶಿಕ್ಷಕಿಯಾಗಿದ್ದ ಕಾಣಿಯೂರು ಪ್ರೌಢ ಶಾಲಾ ವಿಭಾಗದ ದೈಹಿಕ ಶಿಕ್ಷಕಿ ಲಕ್ಷ್ಮಿ ಕೆ. ಟಿ ಇವರು ಮಕ್ಕಳ ಅಭಿವೃದ್ಧಿಗೆ ಪೋಷಕರ ಪಾತ್ರದ ಕುರಿತು ಮಾತನಾಡಿದರು.
ಸಭೆಯಲ್ಲಿ ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿಯಾದ ಸಾಜಿದ ಇವರು ಜೆ. ಇ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಕಾಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಉದುನಡ್ಕ ಇವರು ಮೆದುಳು ಜ್ವರದ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವಂತೆ ಪೋಷಕರಿಗೆ ವಿವರಿಸಿದರು.
ವೇಧಿಕೆಯಲ್ಲಿ ಉಪಧ್ಯಕ್ಷೆ ಕುಸುಮಾವತಿ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಲಿನಾ ಲಾಸ್ರದೊ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರುಗಳಾದ ಪದ್ಮಯ್ಯಗೌಡ ಇವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.