ವಿಟ್ಲ: ನೆಟ್ಲಮುಡ್ನೂರು ಗ್ರಾಮ ಪಂಚಾಯತ್ನ 2022-23 ನೇ ಸಾಲಿನ ಮಕ್ಕಳ ಹಕ್ಕುಗಳ ಮಕ್ಕಳ ಗ್ರಾಮ ಸಭೆಯು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ನೇರಳಕಟ್ಟೆ ಹಿ.ಪ್ರಾ ಶಾಲೆಯ ವಿದ್ಯಾರ್ಥಿನಿ ಹಲೀಮಾ ತಬ್ ಶಿರರವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಕೀಲರವರು ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಂಜಯನಗರ ಹಿ.ಪ್ರಾ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ರಮೇಶ ಉಳಯರವರು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಗ್ರಾಮ ಸಭೆಯಲ್ಲಿ ಮಕ್ಕಳಿಂದ ಮನವಿ, ಸಲಹೆಗಳನ್ನು ಸ್ವೀಕರಿಸಲಾಯಿತು.
ಪಂಚಾಯತ್ ಸದಸ್ಯರಾದ ಪ್ರೇಮಾ , ಲಕ್ಷ್ಮಿ, ಧನಂಜಯ, ಶಿಕ್ಷಣ ಇಲಾಖೆಯ ಸಿ.ಆರ್.ಪಿ ಸತೀಶ್ ರಾವ್. ಆರೋಗ್ಯ ಇಲಾಖೆಯ ಪವಿತ್ರ ಪಿ.ಎಸ್. ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಸೋಮಕ್ಕ. ಪೋಲೀಸ್ ಇಲಾಖೆಯ ಜತ್ತಪ್ಪ, ರೈಲ್ವೆ ಇಲಾಖೆಯ ವಿಠಲ ನಾಯ್ಕ. ಏಮಾಜೆ ಶಾಲಾ ಮುಖ್ಯೋಪಾಧ್ಯಾಯರಾದ ತ್ರಿವೇಣಿ , ನೇರಳಕಟ್ಟೆ ಶಾಲಾ ಶಿಕ್ಷಕರಾದ ಗೀತಾ, ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು. ಪಂಚಾಯತ್ ನ ಸಿಬ್ಬಂದಿ ದೀಪ್ತಿ ಪಿ. ಸ್ವಾಗತಿಸಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅನುಷಾ ಡಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಾ.ಪಂ ಸಿಬ್ಬಂದಿ ಶಶಿಧರ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ. ಕಾರ್ಯದರ್ಶಿಯಾದ ವಿಮಲ.ಪಿ ವಂದಿಸಿದರು.