ಪುತ್ತೂರು: ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು ಇದರ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆ-2022 ಇದರಲ್ಲಿ ಪುತ್ತೂರು ತಾಲೂಕಿನ ಒಂಭತ್ತು ಮಂದಿ ಶಿಕ್ಷಕರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ.
ನೆಟ್ಟಣಿಗೆ-ಮುಡ್ನೂರು ಸರಕಾರಿ ಪ್ರೌಢಶಾಲೆಯ ಉದಯ ಎಸ್.ರವರು ಆಶು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಪ್ರೌಢಶಾಲಾ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ, ಗೋಳಿತೊಟ್ಟು ಶಾಂತಿನಗರ ಶಾಲೆಯ ಮುಖ್ಯಗುರು ಪ್ರದೀಪ್ ಬಾಕಿಲರವರು ಆಶು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಪ್ರಾಥಮಿಕ ಶಾಲಾ ವಿಭಾಗದಿಂದ ರಾಜ್ಯ ಮಟ್ಟಕ್ಕೆ ಆಯ್ಕೆ, ನೇರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಜಾತಾ ಕೆ.ರವರು ರಸಪ್ರಶ್ನೆ ಸಾಮಾನ್ಯ ಜ್ಞಾನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ,ಮುಕ್ವೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿಜಯಾ ಎಚ್.ಆರ್.ರವರು ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಉಮಾವತಿ ಎಲ್.ರವರು ರಸಪ್ರಶ್ನೆ ಸಾಮಾನ್ಯ ಜ್ಞಾನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಸಂಜಯನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಮಿತಾಶ್ರೀ ಬಿ.ರವರು ಚಿತ್ರ ಬರೆಯುವಿಕೆಯಲ್ಲಿ ತೃತೀಯ ಸ್ಥಾನ, ಪುತ್ತೂರು ನಗರ ಸರಕಾರಿ ಪ್ರೌಢಶಾಲೆಯ ವೀಣಾ ಎ.ವಿರವರು ಭಕ್ತಿಗೀತೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಶೋಭಾರವರು ರಸಪ್ರಶ್ನೆ ವಿಜ್ಞಾನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಮುಂಡೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ರವೀಂದ್ರ ಶಾಸೀರವರು ಕಲಿಕೋಪಕರಣ ತಯಾರಿಕೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.