ಪುತ್ತೂರು: ವೀರಮಂಗಲ ಆನಾಜೆ ಶ್ರೀ ಮಹಾವಿಷ್ಣು ಸೇವಾ ಸಮಿತಿಯ 22ನೇ ವಾರ್ಷಿಕ ಸಂಭ್ರಮ-2022 ಹಾಗೂ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಡಿ.3ರಂದು ಸಂಜೆ ವೀರಮಂಗಲ ಆನಾಜೆ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯಲ್ಲಿ ನಡೆಯಲಿದೆ.
ಸಂಜೆ 6 ಗಂಟೆಯಿಂದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಪ್ರಾರಂಭಗೊಳ್ಳಲಿದ್ದು ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯರವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ವೇ.ಮೂ ಶ್ರೀವತ್ಸ ಕೆದಿಲಾಯ ಕಥಾ ಪ್ರವಚನ ನೀಡಲಿದ್ದಾರೆ.
ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಧಾರ್ಮಿಕ ಭಾಷಣ ಮಾಡಲಿದ್ದಾರೆ. ಶಾಸಕ ಸಂಜೀವ ಮಠಂದೂರು, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಐ.ಎಂ.ಕೆ-ಕೆ..ಎಸ್.ಬಿ ಡಾಕ್ಟರ್ಸ್ ಡೇ ಪ್ರಶಸ್ತಿ ಪುರಸ್ಕೃತರಾದ ಆದರ್ಶ ಆಸ್ಪತ್ರೆಯ ಡಾ. ಎಂ.ಕೆ ಪ್ರಸಾದ್ರವರನ್ನು ಸನ್ಮಾನಿಸಲಾಗುವುದು.
ಸಾಂಸ್ಕೃತಿಕ ಕಾರ್ಯಕ್ರಮಗಳು:
ಸಭಾ ಕಾರ್ಯಕ್ರಮದ ಬಳಿಕ ಶ್ರೀಕೃಷ್ಣ ಕಲಾಕೇಂದ್ರ ವೀರಮಂಗಲ, ಭಕ್ತಕೋಡಿ ಇದರ ವಿದ್ಯಾರ್ಥಿಗಳಿಂದ ವಿದ್ವಾನ್ ಗೋಪಾಲಕೃಷ್ಣ ವೀರಮಂಗಲ ರಚಿಸಿ, ನಿರ್ದೇಶಿಸಿದ ‘ವಿನಾಯಕ ಚರಿತೆ’ ನೃತ್ಯ ರೂಪಕ, ಸರಕಾರಿ ಹಿ.ಪ್ರಾ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು ಹಾಗೂ ಬಂಗಾರ್ ಕಲಾವಿದೆರ್ ಪುರುಷರಕಟ್ಟೆ ಇವರಿಂದ ನೈಜ ಘಟನೆ ಆಧಾರಿತ ‘ನಾಡ್ಂಡಲ ತಿಕ್ಕಂದ್’ ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.