ಕಾಣಿಯೂರು :- ಪೋಷಕರು ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಾ ತಮ್ಮ ಮಕ್ಕಳಿಗೆ ಪ್ರೇರಕ ಶಕ್ತಿಯಾಗಬೇಕು . ಆಗ ಮಕ್ಕಳು ಕೂಡ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಮುಂದೊಂದಿನ ರಾಷ್ಟ್ರ ರಕ್ಷಣೆ ಮಾಡುವ ಸೈನಿಕ ವೃತ್ತಿಯಲ್ಲಿ ಸೇವೆ ಸಲ್ಲಿಸುವ ಅವಕಾಶ ಒದಗಿ ಬರಬಹುದು ಎಂದು ಮಾಜಿ ಯೋಧ ಶೀನಪ್ಪ ಬಾರಿಕೆ ಹೇಳಿದರು.
ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ಪೋಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಿವೃತ್ತ ಯೋಧ ಕೊರಗಪ್ಪ ಕಲ್ಪಡ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ. ಬಿ ಧ್ವಜಾರೋಹಣ ಮಾಡಿದರು. ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಜ್ಞಾನೇಶ್ವರಿ, ಆಂಗ್ಲ ಮಾಧ್ಯಮ ವಿಭಾಗದ ಸಹ ಮುಖ್ಯಸ್ಥೆ ಅನಿತಾ ಜೆ. ರೈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಐಶಿತ ರೈ, ಶ್ರಾವ್ಯ ಕೆ ಎಚ್, ಮನಸ್ವಿ ಎಂ ಪ್ರಾರ್ಥಿಸಿದರು .
ಶಿಕ್ಷಕಿ ವಿನಯ ವಿ. ಶೆಟ್ಟಿ ವಂದಿಸಿದರು. ಧನಂಜಯ ಕೆನಾಜೆ ಕಾರ್ಯಕ್ರಮ ನಿರೂಪಿಸಿದರು.ದೈಹಿಕ ಶಿಕ್ಷಣ ಶಿಕ್ಷಕರಾದ ರಂಗನಾಥ, ಜಯಚಂದ್ರ ಮತ್ತು ಶಿಕ್ಷಕ ವೃಂದದವರು ಹಿರಿಯ ವಿದ್ಯಾರ್ಥಿ ಮಿತ್ರರು ಸಹಕರಿಸಿದರು.