ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರೆಸ್‌ಕ್ಲಬ್‌ ಕಟ್ಟಡ ಉದ್ಘಾಟನೆ

0

ವಿಟ್ಲ: ಮಾಧ್ಯಮ ಕ್ಷೇತ್ರವು ಜನಪ್ರತಿನಿಧಿಗಳು ಸರಿಯಾದ ದಾರಿಯಲ್ಲಿ ಸಾಗಲು ಮಾರ್ಗದರ್ಶನ ನೀಡುತ್ತಿದ್ದು, ಸಾಕಷ್ಟು ಸಮಸ್ಯೆಗಳು ಪತ್ರಿಕೆಗಳಿಂದಲೇ ನಮ್ಮ ಅರಿವಿಗೆ ಬರುತ್ತಿದೆ. ಬಂಟ್ವಾಳದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಕಟ್ಟಡ ಹಲವು ವರ್ಷಗಳ ಬೇಡಿಕೆಯಾಗಿದ್ದು, ತನ್ನ ಅನುದಾನದ ಜತೆಗೆ ಸಂಸದರ ಅನುದಾನದ ಸಹಕಾರದಿಂದ ನೂತನ ಕಟ್ಟಡ ನಿರ್ಮಾಣಗೊಂಡಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.


ಅವರು ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಮುಂಭಾಗ ಪುರಸಭಾ ವಾಣಿಜ್ಯ ಸಂಕೀರ್ಣದ ಮೇಲಂತಸ್ತಿನಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ-ಪ್ರೆಸ್‌ಕ್ಲಬ್‌ಗೆ ಬಂಟ್ವಾಳ ಶಾಸಕರು, ದ.ಕ.ಸಂಸದರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡವನ್ನು ಉದ್ಘಾಟಿಸಿದರು.

ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅಧ್ಯಕ್ಷತೆ ವಹಿಸಿದ್ದರು.ವಿಧಾನಸಭಾ ವಿಪಕ್ಷ ಉಪನಾಯಕ, ಶಾಸಕ ಯು.ಟಿ.ಖಾದರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮೊದಲಾದವರು ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ಇಂದಾಜೆ ಅವರು ಆಶಯ ಭಾಷಣ ಮಾಡಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಕರ್ತರಾದ ವೆಂಕಟೇಶ್ ಬಂಟ್ವಾಳ, ವಿಲ್ಫ್ರೆಡ್ ಡಿಸೋಜಾ ರವರನ್ನು ಸಮ್ಮಾನಿಸಲಾಯಿತು. ಹಿರಿಯ ಪತ್ರಕರ್ತ ಮನೋಹರಪ್ರಸಾದ್, ಕಟ್ಟಡದ ಗುತ್ತಿಗೆದಾರ ಧೀರಜ್ ನಾಯ್ಕ್ ಮೊದಲಾದವರನ್ನು ಗೌರವಿಸಲಾಯಿತು.


ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಭಾರತೀಯ ಪತ್ರಕರ್ತರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಮೇಶ್ ಕುಟ್ಟಪ್ಪ, ಕಾರ್ಯಕಾರಿ ಸದಸ್ಯ ರವಿಕುಮಾರ್, ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಬಂಟ್ವಾಳ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಗಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ರುಕ್ಮಯ ಪೂಜಾರಿ, ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ಜಿಲ್ಲಾ ಒಬಿಸಿ ಅಧಿಕಾರಿ ರಶ್ಮಿ ಎಸ್.ಆರ್, ತಹಶೀಲ್ದಾರ್ ಡಾ| ಸ್ಮಿತಾ ರಾಮು, ತಾ.ಪಂ.ಇಒ ರಾಜಣ್ಣ, ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಸಿಂಗ್ ಥೋರಟ್, ಪುರಸಭಾ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಮಾಧ್ಯಮ ಅಕಾಡೆಮಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಭೇಟಿ ನೀಡಿ ಶುಭಹಾರೈಸಿದರು.


ಪ್ರಧಾನ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ ಸ್ವಾಗತಿಸಿದರು. ಸದಸ್ಯ ಸಂದೀಪ್ ಸಾಲ್ಯಾನ್ ರವರು ಸಮ್ಮಾನಿತರ ವಿವರ ನೀಡಿ, ಸದಸ್ಯರಾದ ಕಿರಣ್, ವಿಷ್ಣುಗುಪ್ತ ಪುಣಚ, ರತ್ನದೇವ್ ಪುಂಜಾಲಕಟ್ಟೆ ಸನ್ಮಾನ ಪತ್ರ ವಾಚಿಸಿದರು.


ಸದಸ್ಯರಾದ ಉದಯಶಂಕರ ನೀರ್ಪಾಜೆ ಹಾಗೂ ಹರೀಶ ಮಾಂಬಾಡಿ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾಯಕ ಕೃತಿಕ್ ಶೆಟ್ಟಿ ತಂಡದಿಂದ ಸಂಗೀತ ಕಾರ್ಯಕ್ರಮ, ಜಿ.ವಿ.ರಾರ‍್ಸ್ ಡ್ಯಾನ್ಸ್ ಅಕಾಡೆಮಿಯವರಿಂದ ನೃತ್ಯ ವೈವಿಧ್ಯ, ಪತ್ರಕರ್ತರು ಹಾಗೂ ಹವ್ಯಾಸಿ ಕಲಾವಿದರಿಂದ ಸುದರ್ಶನ ವಿಜಯ ಯಕ್ಷಗಾನ ಬಯಲಾಟ, ಪುಂಜಾಲಕಟ್ಟೆ ತಾಂಬೂಲ ಕಲಾವಿದರಿಂದ ಪರಿಮಳ ಕಾಲೊನಿ ತುಳು ನಾಟಕ ಪ್ರದರ್ಶನಗೊಂಡಿತು

LEAVE A REPLY

Please enter your comment!
Please enter your name here