ಬಿ. ಗುಣರಂಜನ್ ಶೆಟ್ಟಿ
ಪುತ್ತೂರು: ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಪರಿಸರವಾದಿ ಗುಣರಂಜನ್ ಶೆಟ್ಟಿ ಅವರು ಜಯಕರ್ನಾಟಕ ಜನಪರ ವೇದಿಕೆ, ಐಕೇರ್ ಬ್ರಿಗೇಡ್ ಮತ್ತು ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷರಾಗಿದ್ದಾರೆ. ಚಿಕ್ಕಮುಡ್ನೂರು ಉರಮಾಲು ನಿವಾಸಿಯಾಗಿದ್ದು ಬೆಳ್ಳಿಪ್ಪಾಡಿ ಮನೆತನದವರಾಗಿರುವ ಖ್ಯಾತ ಚಲನಚಿತ್ರ ನಟಿ ಅನುಷ್ಕಾ ಶೆಟ್ಟಿಯವರ ಸಹೋದರನಾಗಿರುವ ಗುಣರಂಜನ್ ಶೆಟ್ಟಿಯವರು ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಗುಣರಂಜನ್ ಶೆಟ್ಟಿರವರನ್ನು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾದ ಉತ್ತರಪ್ರದೇಶದ ಕೇಶರ್ ಗಂಜ್ನ ಲೋಕಸಭಾ ಸದಸ್ಯ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ಉಪಾಧ್ಯಕ್ಷ ಆರ್ ಚಂದ್ರಪ್ಪ, ಬೆಂಗಳೂರು ಜಿಲ್ಲಾಧ್ಯಕ್ಷ ಶ್ರೀನಿವಾಸ್, ರಾಜ್ಯ ಮುಖಂಡ, ಉದ್ಯಮಿ ಪ್ರಸಾದ್ ಶೆಟ್ಟಿ ಹುಬ್ಳಿ, ಹಿರಿಯ ಸಲಹೆಗಾರರು ಹಾಗೂ ಲೆಕ್ಕ ಪರಿಶೋಧಕ ಶ್ರೀನಿವಾಸ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.