ಕೊಂಬೆಟ್ಟು ಸರಕಾರಿ ಪ.ಪೂ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

0

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಡಿ.1 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿ ಪಡೀಲು ಪ್ರಶಾಂತ್ ಎಂಟರ್ ಪ್ರೈಸಸ್ ಮಾಲಕ ಹಾಗೂ ರೋಟರಿ ಕ್ಲಬ್ ಪುತ್ತೂರು ಸಿಟಿ ಅಧ್ಯಕ್ಷ ಪ್ರಶಾಂತ್ ಶೆಣೈಯವರು ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡೆಯಲ್ಲಿ ಭಾಗವಹಿಸಿ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾಲೇಜಿನ ಕಾರ್ಯಾಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್‌ರವರು ಮಾತನಾಡಿ, ಕಾಲೇಜಿನ ಪರಂಪರೆಯನ್ನು ಉಳಿಸಿ ಬೆಳೆಸಬೇಕಾಗಿ ಹೇಳಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಧರಣಪ್ಪ ಗೌಡರವರು ವಹಿಸಿದ್ದರು.

ಆರಂಭದಲ್ಲಿ ಕಾಲೇಜಿನ 1600 ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕ್ರೀಡಾಜ್ಯೋತಿಯನ್ನು ತಂದು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ವಿದ್ಯಾರ್ಥಿನಿ ವಿನಿಶಾ ಮತ್ತು ಬಳಗ ಪ್ರಾರ್ಥಿಸಿದರು. ಉಪನ್ಯಾಸಕ ಗೌತಮ್ ಕಾಮತ್ ಸ್ವಾಗತಿಸಿ, ಕ್ರೀಡಾ ಸಂಯೋಜಕ ಪ್ರಕಾಶ್ ವಿ.ಕೆ ವಂದಿಸಿದರು. ಉಪನ್ಯಾಸಕಿ ಕಾತ್ಯಾಯಿನಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಉಪನ್ಯಾಸಕ ವರ್ಗ, ಆಡಳಿತ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here