ವಿಟ್ಲ: ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಕೈಂತಿಲ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರವರ ಪತ್ನಿ ಸವಿತ ಯಾನೆ ಸೇಸಮ್ಮ (50 ವ.) ರವರು ಮೃತ ದುರ್ದೈವಿ.
ಸೇಸಮ್ಮರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿರುವುದಾಗಿ ಅವರ ಸಂಬಂಧಿಕರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮೃತರ ಸಹೋದರ ಕೇಪು ಗ್ರಾಮದ ವಳಕಟ್ಟೆ ನಿವಾಸಿ ಚಂದ್ರಶೇಖರರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.