ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ನೆಲ್ಯಾಡಿಯ ಶಿವಾನಿ, ಮಾದೇರಿಯ ಬೃಂದಾವನ, ಕೌಕ್ರಾಡಿಯ ಧರ್ಮಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಪ್ರಗತಿಬಂಧು ಸ್ವಸಹಾಯ ಸಂಘಗಳ ಪುತ್ತೂರು ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಹಾರ್ಪಳರವರು ಕಾರ್ಯಕ್ರಮ ಉದ್ಘಾಟಿಸಿದರು. ನೆಲ್ಯಾಡಿ ಒಕ್ಕೂಟದ ಅಧ್ಯಕ್ಷೆ ಸುಮಿತ್ರಾ ಅಧ್ಯಕ್ಷತೆ ವಹಿಸಿದ್ದರು. ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಓ, ದ.ಕ.ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವಿಮಲ್‌ಕುಮಾರ್‌ರವರು ಮಾಹಿತಿ ನೀಡಿದರು. ಕೌಕ್ರಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ., ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಜ್ಞಾನ ವಿಕಾಸ ಸಂಯೋಜಕಿಯರಾದ ನಳಿನಾಕ್ಷಿ, ವಸಂತಿ, ಪೂರ್ಣಿಮಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಚೇತನಾ, ಸೇವಾಪ್ರತಿನಿಧಿಗಳು, ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಮಿತ ಶೆಟ್ಟಿ ವರದಿ ವಾಚಿಸಿದರು. ಹೇಮಾವತಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಪೂರ್ಣಿಮಾ ಸ್ವಾಗತಿಸಿ, ವಸಂತಿ ವಂದಿಸಿದರು. ಚೇತನ, ಮೇರಿ ಟೀಚರ್ ರ್ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಮದ ನಂತರ ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.