ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್: ರಾಮಕುಂಜ ಪ.ಪೂ.ಕಾಲೇಜು ವಿದ್ಯಾರ್ಥಿಗಳಿಗೆ ಚಿನ್ನದ ಪದಕ

0

ರಾಮಕುಂಜ: ಶುಬುಕಾನ್ ಕರಾಟೆ ಎಸೋಸಿಯೇಷನ್ ಆಫ್ ಇಂಡಿಯಾ ಇದರ ಆಶ್ರಯದಲ್ಲಿ ಕನ್ಯಾಕುಮಾರಿ ಜಿಲ್ಲೆಯ ಸೈಂಟ್ ಜೋಸೆಫ್ ಹೈಸ್ಕೂಲ್‌ನಲ್ಲಿ ಆಯೋಜಿಸಿದ ಶುಬುಕಾನ್ 18ನೇ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ ಶಿಪ್-2022ರಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಣಂದೇವರವರು ಕುಮಿಟೆ ಮತ್ತು ಟೀಮ್ ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಅಲ್ಲದೇ ಇವರು ಕಟಾ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಕಾಲೇಜಿನ ಇನ್ನೋರ್ವ ಸ್ಪರ್ಧಿ, ಕಾಲೇಜಿನ ವಿದ್ಯಾರ್ಥಿ ನಾಯಕ, ವಿಜ್ಞಾನ ವಿಭಾಗದ ವಿದ್ಯಾರ್ಥಿ ಗಗನ್‌ದೀಪ್‌ರವರು ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರ ವಿಶೇಷ ಪ್ರೋತ್ಸಾಹದ ಮೂಲಕ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here