ಡಿ.11: ಬಿರುಮಲೆ ಬೆಟ್ಟ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಬಿರುಮಲೆ ಬೆಟ್ಟ ಅಭಿವೃದ್ಧಿ ಯೋಜನೆ ಪುತ್ತೂರು ಇದರ ನೇತೃತ್ವದಲ್ಲಿ ವಿವಿಧ ಸಂಘಟನೆಗಳನ್ನು ಸೇರಿಸಿಕೊಂಡು ಜನವರಿ ತಿಂಗಳಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಗಾಳಿಪಟ ಸ್ಪರ್ಧೆ, ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು, ನಿಧಿ ಶೋಧನೆ ಮುಂತಾದ ಕಾರ್ಯಕ್ರಮಗಳನ್ನೊಳಗೊಂಡ ಬಿರುಮಲೋತ್ಸವ ಕಾರ್ಯಕ್ರಮದ ಅಂಗವಾಗಿ ಡಿ.11 ರಂದು ಬೆಳಿಗ್ಗೆ ಬಿರುಮಲೆ ಬೆಟ್ಟದ ಸುತ್ತಮುತ್ತ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬಿರುಮಲಾಸಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಬೇಕು ಎಂದು ಬಿರುಮಲೆ ಬೆಟ್ಟ ಅಭಿವೃದ್ಧಿ ಯೋಜನೆ ಪುತ್ತೂರು ಇದರ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here