ವಿಟ್ಲ: ಗಾಂಜಾ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಯೋರ್ವರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡು ಅಬಕಾರಿ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದ ಘಟನೆ ಇಡ್ಕಿದು ಗ್ರಾಮದ ಉರಿಮಜಲು ಜಂಕ್ಷನ್ ನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ರವೂಫ್ ಎಂಬವರ ಪುತ್ರ ಅಪ್ಪಿ ಅಲಿಯಾಸ್ ಆಫೀಲ್ ಪೊಲೀಸರ ವಶವಾದ ವ್ಯಕ್ತಿ. ಆಫೀಲ್ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕರಿಗೆ ಭಯಹುಟ್ಟಿಸುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಆಫೀಲ್ ನನ್ನು ವಶಕ್ಕೆ ಪಡೆದು ಬಳಿಕ ಅಬಕಾರಿ ಇಲಾಖಾಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದಾರೆ ಎಂದು ಮಾಹಿತಿ ಲಭಿಸಿದೆ.