ಪುತ್ತೂರು: ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದಿಂದ ಬೀರ್ನಹಿತ್ಲು ಕಿ.ಪ್ರಾ.ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವ ಪ್ರಯುಕ್ತ ಪೊಕ್ಸೋ ಕಾಯಿದೆಯ ಕಾನೂನು ಮಾಹಿತಿ ಹಾಗೂ ಜಾಗೃತಿ ಕಾರ್ಯಾಗಾರ ನಡೆಯಿತು.
ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ಒಕ್ಕೂಟದ ಅಧ್ಯಕ್ಷೆ ನಯನಾ ರೈ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಎ ಹರಿಣಾಕ್ಷಿ ಜೆ. ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯೆ ಸುಮಂಗಲಾ ಶೆಣೈ ಮಾಹಿತಿ ನೀಡಿದರು. ಸದಸ್ಯ ಪ್ರಶಾಂತ್ ಮುರ ಸ್ವಚ್ಚತೆ ಬಗ್ಗೆ ಮಾಹಿತಿ ನೀಡಿದರು. ಶಾಂತಿ ಟಿ. ಹೆಗಡೆ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಮುಖ್ಯಗುರು ಪುಷ್ಪ ವಂದಿಸಿದರು. ಸಹಶಿಕ್ಷಕರು ಸಹಕರಿಸಿದರು.