ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ “ಕ್ರೀಡಾ ರಶ್ಮಿ”

0

  • ಕ್ರೀಡೆಯಿಂದ ವ್ಯಕ್ತಿತ್ವ ವಿಕಸನ- ಡಾ. ಆಂಟನಿ ಪ್ರಕಾಶ್
  • ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯ-ಸೀತಾರಾಮ ರೈ

ಚಿತ್ರ- ಉಮಾಪ್ರಸಾದ್ ರೈ ನಡುಬೈಲು

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ “ಕ್ರೀಡಾ ರಶ್ಮಿ” ದ. 10 ರಂದು ಜರಗಿತು.

 

ಕ್ರೀಡೆಯಿಂದ ವ್ಯಕ್ತಿತ್ವ ವಿಕಸನ- ಡಾ. ಆಂಟನಿ ಪ್ರಕಾಶ್

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಡಾ.ಆಂಟಿನಿ ಪ್ರಕಾಶ್ ಮೊಂತೆರೋರವರು ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿ ಶಿಕ್ಷಣ ಕಲಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆ ಜೊತೆಗೆ ದೈಹಿಕ ಆರೋಗ್ಯವನ್ನು ಪಡೆಯಬಹುದು, ವಿದ್ಯಾರ್ಥಿಗಳು ಮಾನವೀಯ ಮೌಲ್ಯವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದ ಅವರು, ಸವಣೂರಿನಲ್ಲಿ ಎಲ್‌ಕೆಜಿಯಿಂದ ಹಿಡಿದು ಪದವಿ ತನಕ ಶಿಕ್ಷಣ ನೀಡುವ ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳನ್ನು ನಡೆಸುತ್ತಿರುವ ಸವಣೂರು ಸೀತಾರಾಮ ರೈಯವರ ಸಾಧನೆಯನ್ನು ಪ್ರಶಂಶಿಸಿದರು.

ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯ-ಸೀತಾರಾಮ ರೈ

ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈಯವರು ಮಾತನಾಡಿ ಕ್ರೀಡೆಯಲ್ಲಿ ಭಾಗವಹಿಸುವುದೇ ಮುಖ್ಯವಾಗಿದ್ದು, ಬಹುಮಾನ ಪಡೆಯುವುದು ಮುಖ್ಯವಲ್ಲ, ಕ್ರೀಡಾ ಚಟುವಟಿಕೆಯಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿದರು.

ಕ್ರೀಡಾ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿ ಪ್ರಣವ್‌ರವರು ನೇರವೇರಿಸಿದರು. ವೇದಿಕೆಯಲ್ಲಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಶ್ವಿನ್ ಎಲ್ ಶೆಟ್ಟಿ ಸವಣೂರು, ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿರವರುಗಳು ಉಪಸ್ಥಿತರಿದ್ದರು. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಸ್ವಾಗತಿಸಿ, ವಿದ್ಯಾರ್ಥಿಗಳಾದ ಫಾತಿಮ ಶಮ್ನಾ ವಂದಿಸಿ. ಸಮಾಹಿತ್ ಜೈನ್ ಕಾರ‍್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here