ಡಿ.12: ಮುಂಡೂರು ಪ್ರಾ.ಕೃ.ಪ. ಸಹಕಾರಿ ಸಂಘದ ಆಶ್ರಯದಲ್ಲಿ ತೋಟಗಾರಿಕೆ ಬೆಳೆಗಳ ಸುಧಾರಿತ ಬೇಸಾಯ ವಿಧಾನ, ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಮಾಹಿತಿ ಕಾರ್ಯಾಗಾರ

0

ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಕೃಷಿ ವಿಜ್ಞಾನ ಕೇಂದ್ರ ದಕ್ಷಿಣ ಕನ್ನಡ ಮಂಗಳೂರು ಇದರ ಸಹಯೋಗದೊಂದಿಗೆ ತೋಟಗಾರಿಕೆ ಬೆಳೆಗಳ ಸುಧಾರಿತ ಬೇಸಾಯ ವಿಧಾನಗಳ ಕುರಿತು ಹಾಗೂ ಅಡಿಕೆ ಎಲೆಚುಕ್ಕಿ ರೋಗ, ಅಡಿಕೆಯಲ್ಲಿ ಹಿಂಗಾರ ಒಣಗುವ ರೋಗದ ಹತೋಟಿ ಬಗ್ಗೆ ಮಾಹಿತಿ ಕಾರ್ಯಾಗಾರ ಡಿ.12ರಂದು ಮುಂಡೂರು ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ಪೂರ್ವಾಹ್ನ ಗಂಟೆ ೧೦.೩೦ಕ್ಕೆ ನಡೆಯಲಿದೆ, ಮುಂಡೂರು ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಅಧ್ಯಕ್ಷತೆ ವಹಿಸಲಿದ್ದು ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್ ಕೆ ಉದ್ಘಾಟಿಸಲಿದ್ದಾರೆ. ಹಿರಿಯ ವಿಜ್ಞಾನಿ, ಕೆ.ವಿ.ಕೆ ಮಂಗಳೂರು ಇದರ ಮುಖ್ಯಸ್ಥರಾದ ಡಾ.ಟಿ.ಜೆ ರಮೇಶ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಕೆ.ವಿ.ಕೆ ಮಂಗಳೂರು ಸಸ್ಯ ಸಂರಕ್ಷಣೆಯ ವಿಜ್ಞಾನಿ ಡಾ.ಕೇದಾರನಾಥ ಹಾಗೂ ಕೆವಿಕೆ ಮಂಗಳೂರು ತೋಟಗಾರಿಕೆ ವಿಜ್ಞಾನಿ ಡಾ.ರಶ್ಮಿ ಆರ್ ಭಾಗವಹಿಸಲಿದ್ದಾರೆ. ಸಂಘದ ಸದಸ್ಯರಿಗೆ ಸರಕಾರದ ಯೋಜನೆಯಾದ ಯಶಸ್ವಿನಿ ಆರೋಗ್ಯ ರಕ್ಷಣಾ ವಿಮೆಯ ಮಾಹಿತಿಯನ್ನು ಮತ್ತು ನೋಂದಾವಣೆಯನ್ನು ಇದೇ ಸಂದರ್ಭದಲ್ಲಿ ಮಾಡಲಾಗುವುದು ಎಂದು ಮುಂಡೂರು ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here