ನ್ಯಾಯವಾದಿಯ ಮೇಲೆ ಹಲ್ಲೆ ಆರೋಪ ; ಪೂಂಜಾಲಕಟ್ಟೆ ಎಸ್.ಐ ಸುತೇಶ್ ಅಮಾನತು

0

ಪುತ್ತೂರು: ನ್ಯಾಯವಾದಿ ಮೇಲೆ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ ಐ ಸುತೇಶ್‌ರವರು ಅಮಾನತುಗೊಂಡಿದ್ದಾರೆ. ನ್ಯಾಯವಾದಿ ಕುಲದೀಪ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಎಸ್ ಐ ಸುತೇಶ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಡಿಐಜಿ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಸೇರಿದಂತೆ ಜಿಲ್ಲೆಯಾದ್ಯಂತ ವಕೀಲರು ಪ್ರತಿಭಟನೆ ನಡೆಸಿದ್ದರು.

ಹಲ್ಲೆ ನಡೆಸಿದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಎಸ್ ಐ ಸುತೇಶ್ ಅವರನ್ನು ದ.ಕ. ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಕಠಿಣ ಕ್ರಮಕ್ಕೆ ಆಗ್ರಹಿಸಿ ವಕೀಲರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಇದೀಗ ಪಶ್ಚಿಮ ವಲಯ ಡಿಐಜಿ ಡಾ. ಚಂದ್ರಗುಪ್ತ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here