ರಾಮಕುಂಜ: ಕಡಬ ತಾಲೂಕು ಕೊಯಿಲ ಗ್ರಾಮದ ವಳಕಡಮ ಸರಕಾರಿ ಕಿ.ಪ್ರಾ.ಶಾಲಾ 2022-೨೩23ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಡಿ.11ರಂದು ಸಂಜೆ ನಡೆಯಿತು.
ನಿವೃತ್ತ ಮುಖ್ಯಗುರುಗಳಾದ ಉಮೇಶ್ ಗೌಡ ಬಿ. ಉದ್ಘಾಟಿಸಿ ಶುಭ ಹಾರೈಸಿದರು. ಕೊಯಿಲ ಗ್ರಾ.ಪಂ.ಅಧ್ಯಕ್ಷ ಹರ್ಷಿತ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಪುತ್ತೂರಿನ ಪ್ರಭಾರ ಸಮನ್ವಯಾಧಿಕಾರಿ ನವೀನ್ ವೇಗಸ್, ರಾಮಕುಂಜ ಕ್ಲಸ್ಟರ್‌ನ ಸಿಆರ್‌ಪಿ ಮಹೇಶ್ ಎಂ., ಎಪಿಎಂಸಿ ಸದಸ್ಯ ಶೀನಪ್ಪ ಗೌಡ ವಳಕಡಮ, ಹಿರೇಬಂಡಾಡಿ ಗ್ರಾ.ಪಂ.ಸದಸ್ಯ ಚಂದ್ರಶೇಖರ ಮಾಳರವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು. ಕೊಯಿಲ ಗ್ರಾ.ಪಂ.ಉಪಾಧ್ಯಕ್ಷೆ ಕಮಲಾಕ್ಷಿ ಪಾಜಳಿಕೆ, ಸದಸ್ಯರಾದ ಸೀತಾರಾಮ ಬಲ್ತಕುಮೇರ್, ಲತಾ ನವೀನ್‌ಪೂಜಾರಿ ಎಡೆಚ್ಚಾರ್, ಎಸ್‌ಡಿಎಂಸಿ ಅಧ್ಯಕ್ಷ ಯು.ರಾಮಣ್ಣ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ಮೋಹನ್‌ದಾಸ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾರ್ಷಿಕೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ, ಪೋಷಕರಿಗೆ, ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಮುಖ್ಯಶಿಕ್ಷಕಿ ಸಂಧ್ಯಾ ಕೆ.,ಸ್ವಾಗತಿಸಿ, ಅತಿಥಿ ಶಿಕ್ಷಕಿ ಸುಜಾತ ಎನ್.ವಂದಿಸಿದರು. ಶಿಕ್ಷಕಿ ಲಾವಣ್ಯ ವಿ.ಕಾರ್ಯಕ್ರಮ ನಿರೂಪಿಸಿದರು. ವಳಕಡಮ, ಕೊನೆಮಜಲು ಅಂಗನವಾಡಿ ಮಕ್ಕಳಿಂದ, ಶಾಲಾ ವಿದ್ಯಾರ್ಥಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.