ಮಜ್ಜಾರಡ್ಕದಲ್ಲಿ ಮೇಳೈಸಿದ ಬಾಲಮೇಳ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

0

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜ್ಜಾರಡ್ಕ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ವತಿಯಿಂದ ಮಜ್ಜಾರಡ್ಕ ಅಂಗನವಾಡಿ ಕೇಂದ್ರದ ಬಾಲಮೇಳ ಕಾರ್ಯಕ್ರಮ ದ.11 ರಂದು ಮಜ್ಜಾರಡ್ಕ ಅಂಗನವಾಡಿ ಕೇಂದ್ರದ ಆವರಣದಲ್ಲಿ ನಡೆಯಿತು. ಅಂಗನವಾಡಿಯ ಪುಟಾಣಿ ಯಶ್ವಿತ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ರೇಖಾ ಬಾಲಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಮೈ ಪಯಂದೂರು ದೈವಸ್ಥಾನದ ಆಡಳಿತ ಮೊಕ್ತೇಸರ ಸೋಮಪ್ಪ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಬಾಲಮೇಳದ ಅಂಗವಾಗಿ ಅಂಗನವಾಡಿ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಅರಿಯಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಂತೋಷ ಮಣಿಯಾಣಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.


ಸುದ್ದಿ ಬಿಡುಗಡೆ ವರದಿಗಾರ ಸಿ ಶೇ ಕೆಜೆಮಾರ್ ಮಾತನಾಡಿ ಇದು ಕೇವಲ ಪುಟಾಣಿಗಳಿಗೆ ಮಾತ್ರ ಸೀಮಿತವಾಗದೆ ಊರಿನ ಎಲ್ಲರ ಒಗ್ಗೂಡಿಕೆಯಿಂದ ಮೂಡಿಬಂದಿರುವುದು ಸಂತಸದ ಸಂಗತಿ ಎಂದರು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಮಾಜಿ ಅಧ್ಯಕ್ಷೆ ನಯನ ಎಂ. ರೈ ಅವರನ್ನು ಸನ್ಮಾನಿಸಿ ಬಿಳ್ಕೊಡಲಾಯಿತು. ನಂತರ 2021-22 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಾದ ಮಂಜುಳಾ, ವಿನ್ಯಾಸ್, ಮೋಕ್ಷಿತಾ, ಹರೀಶ್‌ರವರುಗಳನ್ನು ಸನ್ಮಾನಿಸಲಾಯಿತು. ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ರೈ ಜಾರತ್ತಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೇಖಾ ಬಾಲಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರಾಜೇಶ್ ಮಣಿಯಾಣಿ ವಂದಿಸಿದರು. ದಿವ್ಯಶ್ರೀ ವಜ್ರದುಂಬಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಶಿಕ್ಷಕಿ ವಸಂತಿ, ಸಹಾಯಕಿ ಹೊನ್ನಮ್ಮ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬಹುಮಾನ ಪ್ರಾಯೋಜಕ ಹರೀಶ್ ರೈ ಅಮೈ, ಊಟದ ವ್ಯವಸ್ಥೆಯನ್ನು ರೇಖಾ ಬಾಲಕೃಷ್ಣ, ಮಕ್ಕಳಿಗೆ ಸಿಹಿ ವ್ಯವಸ್ಥೆಯನ್ನು ಮಹಮ್ಮದ್ ಮಜೀದ್ ಮಾಡುವ ಮೂಲಕ ಸಹಕರಿಸಿದ್ದರು.

LEAVE A REPLY

Please enter your comment!
Please enter your name here