ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಎಸ್ವಿಎಸ್ ದೇವಳಾಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಪೂರ್ವಿ ಎಂ.ಎಸ್ ಹಾಗೂ ರಚನಾ ಪಿಂಟೋರವರು ದ್ವಿತೀಯ ಸ್ಥಾನವನ್ನು ಪಡೆದು ರಾಯಚೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಪೂರ್ವಿ ಎಂ.ಎಸ್ರವರು ಸುಳ್ಯ ಎನ್ಎಂಸಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸೀತಾರಾಮ ಗೌಡ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಅಶ್ವಿನಿ ಎಂರವರ ಪುತ್ರಿ ಹಾಗೂ ರಚನಾ ಪಿಂಟೋರವರು ಸಾಮೆತ್ತಡ್ಕ ನಿವಾಸಿ ರಿಚರ್ಡ್ ಪಿಂಟೋ ಹಾಗೂ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಲವೀನಾ ಪಿಂಟೋರವರ ಪುತ್ರಿಯಾಗಿದ್ದಾರೆ.