ನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತಟ್ಟು ಗ್ರಾಮದ ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯ ‘ರಜತ ಮಹೋತ್ಸವ’ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಡಿ.17 ರಂದು ನಡೆಯಲಿದೆ ಎಂದು ರಜತ ಮಹೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಕಾಂಚನ, ಶಾಲಾ ಮುಖ್ಯಶಿಕ್ಷಕ ಪ್ರದೀಪ್ ಬಾಕಿಲ, ಎಸ್ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಗುರುಂಪು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಶಾಲಪ್ಪ ನಾಯ್ಕ್ ಹಾಗೂ ಸದಸ್ಯರು ತಿಳಿಸಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ರಜತ ಮಹೋತ್ಸವ ಸಮಿತಿ ಗೌರವಾಧ್ಯಕ್ಷರಾದ ವೆಂಕಪ್ಪ ಗೌಡ ಪೆರ್ಲ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಿವೃತ್ತ ತಹಶೀಲ್ದಾರ್ ಕೃಷ್ಣಪ್ಪ ಪೂಜಾರಿ ಡೆಂಬಲೆ ಉದ್ಘಾಟಿಸಲಿದ್ದಾರೆ. ಮೂಡಬಿದ್ರೆ ಆಳ್ವಾಸ್ ಇನ್ಸ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿಯ ಉಪನ್ಯಾಸಕ ಅಜಿತ್ಕುಮಾರ್ ಪಾಲೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಥಳೀಯ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮತ್ತು ಊರವರಿಂದ ಛದ್ಮವೇಷ ನಡೆಯಲಿದೆ.
ಸಂಜೆ 6.30 ರಿಂದ ಶಾಲಾ ರಜತ ಮಹೋತ್ಸವದ ಸಭಾ ಕಾರ್ಯಕ್ರಮ ಹಾಗೂ ಸನ್ಮಾನ ನಡೆಯಲಿದೆ. ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಗೋಳಿತ್ತಟ್ಟು ಗ್ರಾ.ಪಂ.ಅಧ್ಯಕ್ಷ ಜನಾರ್ದನ ಗೌಡ ಪಠೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು, ತಾ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಪುತ್ತೂರು ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಎಸ್., ಜಿ.ಪಂ.ನಿಕಟಪೂರ್ವ ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ನಿಕಟಪೂರ್ವ ಸದಸ್ಯೆ ತೇಜಸ್ವಿನಿಶೇಖರ ಗೌಡ ಕಟ್ಟಪುಣಿ, ಕ.ರಾ.ಪ್ರಾ.ಶಾ.ಶಿಕ್ಷಕರ ಸಂಘದ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಶಿವಪ್ರಸಾದ್ ರೈ, ಕ.ರಾ.ಸರಕಾರಿ ನೌಕರರ ಸಂಘದ ಕಡಬ ತಾಲೂಕು ಅಧ್ಯಕ್ಷ ವಿಮಲ್ಕುಮಾರ್ ನೆಲ್ಯಾಡಿ, ಕ.ರಾ.ಪ್ರಾ.ಶಾ.ಶಿಕ್ಷಕರ ಕಡಬ ತಾಲೂಕು ಘಟಕದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ದ.ಕ.ಜಿಲ್ಲಾ ನಿರ್ದೇಶಕ ಪ್ರವೀಣ ಕುಮಾರ್, ನಿವೃತ್ತ ವಿದ್ಯಾಧಿಕಾರಿ ಕಾಂಚನ ಸುಂದರ ಭಟ್, ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದ ಆಡಳಿತ ಮೊಕ್ತೇಸರ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಬೆಳ್ತಂಗಡಿ ಅಭ್ಯುದಯ ಕನ್ಸ್ಟ್ರಕ್ಷನ್ಸ್ನ ವಸಂತ ಮಜಲು, ನ್ಯಾಯವಾದಿ ಯಶೋಧರ ಪಿ.ಕರ್ಕೇರ, ಕೊಣಾಲು ಶಾಲಾ ಮುಖ್ಯಶಿಕ್ಷಕಿ ಗಿರಿಜ ಪಿ., ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯರಾದ ಬಾಲಕೃಷ್ಣ ಅಲೆಕ್ಕಿ, ಹೇಮಲತಾ ಮುರಿಯೇಲು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ.ನಾರಾಯಣ ಭಟ್ ರಾಮಕುಂಜ ಅವರು ಶೈಕ್ಷಣಿಕ ಉಪನ್ಯಾಸ ನೀಡಲಿದ್ದಾರೆ. ದಾನಿಗಳಿಗೆ ಸನ್ಮಾನ ನಡೆಯಲಿದೆ.
—ಸಾಂಸ್ಕೃತಿಕ ಕಾರ್ಯಕ್ರಮ:
ಡಿ.17 ರಂದು ಸಂಜೆ 5 ರಿಂದ ಸ್ಥಳೀಯ ಅಂಗನವಾಡಿ ಹಾಗೂ ನಲಿಕಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ಹಿರಿಯ ವಿದ್ಯಾರ್ಥಿಗಳು ಹಾಗೂ ಊರವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬಳಿಕ ಆದರ್ಶ ಯುವಕ ಮಂಡಲ ಶಾಂತಿನಗರ ಇವರ ಪ್ರಾಯೋಜಕತ್ವದಲ್ಲಿ ಶಾರದಾ ಆರ್ಟ್ಸ್ ಕಲಾವಿದೆರ್ ಮಂಜೇಶ್ವರ ಅಭಿನಯದ ತುಳುನಾಟಕ’ ಯಾನ್ ಉಲ್ಲೆತ್ತ’ ನಡೆಯಲಿದೆ.