ಪುತ್ತೂರು: ಪಶ್ಚಿಮವಲಯ ಐಜಿಪಿ ಡಾ.ಚಂದ್ರಗುಪ್ತ ಅವರು ಡಿ.16ರಂದು ಬೆಳಿಗ್ಗೆ ಪುತ್ತೂರು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದರು.
ಪಶ್ಚಿಮವಲಯ ಐಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪುತ್ತೂರಿಗೆ ಅವರ ಮೊದಲ ಭೇಟಿಯಾಗಿತು. ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ್ ಮತ್ತು ಪುತ್ತೂರು ಉಪವಿಭಾಗ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.