ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಥಮ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಈ ವರ್ಷ ಜ.25 ರಿಂದ 27 ರ ತನಕ ನಡೆಯಲಿರುವ ಪ್ರಥಮ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯು ಡಿ.16ರಂದು ಬಿಡುಗಡೆಗೊಂಡಿತು.


ಬೊಳುವಾರು ಮಹಾವೀರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಅಶೋಕ್ ಪಡಿವಾಳ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಊರ,‌ ಪರವೂರ ಭಕ್ತಾದಿಗಳ ಸಹಕಾರದೊಂದಿಗೆ ಜಾತ್ರೆಯು ಉತ್ತಮ ರೀತಿಯಲ್ಲಿ ನಡೆಯಲಿ ಎಂದು ಹಾರೈಸಿದರು.

ಆಧ್ಯಕ್ಷತೆ ವಹಿಸಿದ್ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಜಾತ್ರೋತ್ಸವ ಯಶಸ್ವಿಯಾಗಿ ನೆರವೇರುವಲ್ಲಿ ಪ್ರತಿಯೊಬ್ಬರು ಸಹಕರಿಸುವಂತೆ ಮನವಿ ಮಾಡಿದರು. ದೇವಸ್ಥಾನದ ತಂತ್ರಿ ಪ್ರೀತಂ ಪುತ್ತೂರಾಯ, ಜಾತ್ರೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಮೊಟ್ಟೆತ್ತಡ್ಕ, ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿ ಸದಸ್ಯೆ ಶಶಿಕಲ ನಿರಂಜನ ರೈ ಪ್ರಾರ್ಥಿಸಿದರು. ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಸ್ವಾಗತಿಸಿದರು. ಅಧ್ಯಕ್ಷ ಭೀಮಯ್ಯ ಭಟ್ ವಂದಿಸಿದರು. ಉದಯ ಕುಮಾರ್ ರೈ ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here