ಚಿತ್ರ: ಸಂತೋಷ್ ಮೊಟ್ಟೆತ್ತಡ್ಕ
ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ದ.16 ರಂದು ಶ್ರೀ ಕ್ಷೇತ್ರದಲ್ಲಿ ಜನವರಿ ತಿಂಗಳಿನಲ್ಲಿ ನಡೆಯುವ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರ ಅಧ್ಯಕ್ಷತೆಯಲ್ಲಿ ನೆರವೇರಿತು.
ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನವು ವರ್ಷದಿಂದ ವರ್ಷಕ್ಕೆ ಭಕ್ತರ ಭಕ್ತಿಯಿಂದ ಅಭಿವೃದ್ಧಿ ಹೊಂದುತ್ತಿದೆ ಮಾತ್ರವಲ್ಲದೆ ತಾಲೂಕಿನಾದ್ಯಂತ ಶ್ರೀ ಕ್ಷೇತ್ರದ ಬಗ್ಗೆ ಉತ್ತಮ ಸಂದೇಶ ಹೋಗುತ್ತಿದೆ. ಈಗಾಗಲೇ ರೂ.12 ಲಕ್ಷ ವೆಚ್ಚದಲ್ಲಿ ಶ್ರೀ ಕ್ಷೇತ್ರದಲ್ಲಿ ಚಪ್ಪರ, ಅನ್ನಛತ್ರ, ಶೌಚಾಲಯ ಮುಂತಾದ ಮೂಲಭೂತ ಸೌಕರ್ಯಗಳು ದಾನಿಗಳ ಸಹಕಾರದಿಂದ ಯಶಸ್ವಿಯಾಗಿ ನೆರವೇರಿದೆ. ಶ್ರೀ ಕ್ಷೇತ್ರಕ್ಕೆ ಆಗಮಿಸಿ ಭಕ್ತಿಯಿಂದ ಪ್ರಾರ್ಥಿಸುವ ಭಕ್ತರಿಗೆ ಶ್ರೀ ಕೊರಗಜ್ಜ ವರವ ನೀಡಿ ಆಶೀರ್ವದಿಸುತ್ತಿದ್ದು, ಮಾತ್ರವಲ್ಲದೆ ಶ್ರೀ ಕ್ಷೇತ್ರ ಶಕ್ತಿ ಕೇಂದ್ರವಾಗಿ ಹೊರ ಹೊಮ್ಮುತ್ತಿದೆ. ಶ್ರೀ ಕ್ಷೇತ್ರವನ್ನು ಎಲ್ಲರೂ ನಮ್ಮದು ಎಂದು ಅರಿತು ಮುಂದಿನ ದಿನಗಳಲ್ಲಿ ನಡೆಯುವ ವಾರ್ಷಿಕ ನೇಮೋತ್ಸವವನ್ನು ಶಿಸ್ತುಬದ್ಧವಾಗಿ ನಡೆಸುತ್ತಾ ಯಶಸ್ವಿಗೊಳಿಸಬೇಕು ಎಂದರು.
ಶ್ರೀ ಕ್ಷೇತ್ರದ ಅರ್ಚಕರಾದ ಕುಂಡ ಮೊಗೇರ, ಅಣ್ಣು ಮಣ್ಣಾಪು, ರವಿ ಮಣ್ಣಾಪು, ಮಧ್ಯಸ್ತರಾದ ಗಣೇಶ್ ಪೂಜಾರಿ ಕೆಮ್ಮಿಂಜೆರವರು ಸಂಕ್ರಮಣ ಸೇವೆಯನ್ನು ನಡೆಸುವಲ್ಲಿ ಸಹಕರಿಸಿದರು. ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಅಧ್ಯಕ್ಷ ವಿಶ್ವನಾಥ್ ಮಣ್ಣಾಪು, ಉಪಾಧ್ಯಕ್ಷ ವಿಶ್ವನಾಥ್ ಪೂಜಾರಿ ಮೊಟ್ಟೆತ್ತಡ್ಕ, ಕಾರ್ಯದರ್ಶಿ ದಿನೇಶ್ ಮಣ್ಣಾಪು, ವಿಶ್ವನಾಥ ನಾಯ್ಕ ಅಮ್ಮುಂಜ, ಸುಧೀರ್ ಅತ್ತಾಳ, ಗುರುವ ಮಣ್ಣಾಪು, ವಿಶ್ವಜಿತ್ ಅಮ್ಮುಂಜ, ಉಮೇಶ್ ಮಣ್ಣಾಪು, ಉಮೇಶ್ ರೈ ನಡುಬೈಲು ಬೆಂಗಳೂರು, ಸುಜೀರ್ ಶೆಟ್ಟಿ ನುಳಿಯಾಲು, ನಾರಾಯಣ ನಾಯ್ಕ ಸಿಂಹವನ ಪಂಜಳ, ಪಂಜಳ ಶ್ರೀರಾಂ ಫ್ರೆಂಡ್ಸ್ ಸದಸ್ಯರು ಸಹಿತ ಊರಿನ ಮತ್ತು ಶ್ರೀ ಕ್ಷೇತ್ರದ ಭಕ್ತಾಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಂಗಾಧರ್ ಮಣ್ಣಾಪು ಸ್ವಾಗತಿಸಿ, ವಂದಿಸಿದರು.