ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಪುತ್ತೂರು ಮತ್ತು ಕೆದಂಬಾಡಿ ಗ್ರಾಮ ಪಂಚಾಯತ್ ಒಪ್ಪಂದದ ಮೇರೆಗೆ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರ ನಡೆದಿದ್ದು ಇದರ ಪ್ರಥಮ ಕಾರ್ಯಕ್ರಮ ದ.೧೭ ರಂದು ನಡೆಯಿತು.
ಕದಂಬಾಡಿ ಗ್ರಾಮ ಪಂಚಾಯತ್ ಹಾಗೂ ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯಿಂದ ಸ್ವಚ್ಛ ಕೆದಂಬಾಡಿ ಕಾರ್ಯಕ್ರಮದಡಿ ಸಾರೆಪುಣಿಯಿಂದ ಸನ್ಯಾಸಿಗುಡ್ಡೆ ಸರಕಾರಿ ಶಾಲಾ ತನಕ ರಸ್ತೆ ಸ್ವಚ್ಛತೆ, ರಸ್ತೆ ದುರಸ್ತಿ ನಡೆಯಿತು. ರಾ.ಸೇ.ಯೋಜನೆಯ ವಿದ್ಯಾರ್ಥಿಗಳು ರಸ್ತೆ ಬದಿಯ ಗಿಡಗಂಟಿಗಳನ್ನು ತೆರವುಗೊಳಿಸಿ, ರಸ್ತೆ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್‌ಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಇದಲ್ಲದೆ ರಸ್ತೆಗಳಲ್ಲಿದ್ದ ಗುಂಡಿಗಳಿಗೆ ಮಣ್ಣು ಹಾಕಿ ದುರಸ್ತಿಗೊಳಿಸಿದರು.
ಈ ಸಂದರ್ಭದಲ್ಲಿ ಕೆದಂಬಾಡಿ ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರ, ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದ ಅಧ್ಯಕ್ಷ ಜೈಶಂಕರ್ ರೈ ಬೆದ್ರುಮಾರು, ಪ್ರಕಾರ್ಯದರ್ಶಿ ಸಂತೋಷ್ ರೈ ಕೋರಂಗ, ಕೋಶಾಧಿಕಾರಿ ಕೈಲಾಸ್ ಗೌಡ ಕೆದಂಬಾಡಿ, ಪಂಚಾಯತ್ ಸದಸ್ಯರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ವಿಠಲ ರೈ ಮಿತ್ತೋಡಿ, ಅಸ್ಮಾ ಗಟ್ಟಮನೆ, ಕೃಷ್ಣ ಕುಮಾರ್ ಇದ್ಯಪೆ, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ವಾಸುದೇವ ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ಸ್ವಾಗತಿಸಿ, ಗ್ರೇಡ್೧ ಕಾರ್ಯದರ್ಶಿ ಸುನಂದ ರೈ ವಂದಿಸಿದರು. ಸಿಬ್ಬಂದಿಗಳಾದ ಗಣೇಶ್, ವಿದ್ಯಾಪ್ರಸಾದ್ ಸಹಕರಿಸಿದ್ದರು.