ಪುತ್ತೂರು: ಕನ್ನಡ ಮಾಧ್ಯಮದಲ್ಲಿ ಅತೀ ದೊಡ್ಡ ಶಿಕ್ಷಣ ಸಂಸ್ಥೆ ಎಂದೇ ಖ್ಯಾತಿ ಪಡೆದ ದರ್ಬೆ ಲಿಟ್ಲ್ ಫ್ಲವರ್ ಹಿ.ಪ್ರಾ ಶಾಲಾ 94ನೇ ವರ್ಷದ ಮಕ್ಕಳ ಹಬ್ಬ `ಚಿಣ್ಣರ ಆಯನ’ ಕಾರ್ಯಕ್ರಮ ಡಿ.20 ಹಾಗೂ 21ರಂದು ನಡೆಯಲಿದೆ.
ಕಾರ್ಯಕ್ರಮದಲ್ಲಿ ಶೈಕ್ಷಣಿಕ, ಕ್ರೀಡೆ, ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13 ಮಂದಿ ಹಿರಿಯ ವಿದ್ಯಾರ್ಥಿಗಳಿಗೆ ಕಿರಿಯ ಪುಷ್ಪ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಡಿ.20ರಂದು ನಡೆಯುವ ಕಾರ್ಯಕ್ರಮದಲ್ಲಿ ಉದ್ಯಮಿ ಪ್ರಸನ್ನ ಶೆಟ್ಟಿ ಸಿಝ್ಲರ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾಗಿರುವ ಸಂಪ್ಯ ಆನಂದ ಆಶ್ರಮ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ಡಾ.ಗೌರಿ ಪೈ ಬಹುಮಾನ ವಿತರಿಸಲಿದ್ದಾರೆ. ಹಿರಿಯ ವಿದ್ಯಾರ್ಥಿ, ಸರಕಾರಿ ಆಸ್ಪತ್ರೆಯ ವೈದ್ಯಕೀಯ ತಜ್ಷ ಡಾ.ಯಧುರಾಜ್, ಉದ್ಯಮಿ ಉಜ್ವಲ್ ಪ್ರಭು, ಬ್ಯಾಂಕ್ ಆಫ್ ಬರೋಡಾದ ಹಿರಿಯ ಶಾಖಾ ಪ್ರಬಂಧಕಿ ಮಮತಾ, ನಗರ ಕ್ಲಸ್ಟರ್ ಸಿಆರ್‌ಪಿ ಶಶಿಕಲಾ, ಉದ್ಯಮಿ ನಸೀಮ ಮೊಹಮ್ಮದ್, ಹಿರಿಯ ವಿದ್ಯಾರ್ಥಿ, ನ್ಯಾಯವಾದಿ ಕವನ್ ನಾಕ್, ದರ್ಬೆ ಪ್ರಕಾಶ್ ಡೆಂಟಲ್ ಕ್ಲಿನಿಕ್‌ನ ಡಾ.ಶ್ರೀಪ್ರಕಾಶ್ ಬಿ., ಮಂಗಳೂರು ಬಜಾಜ್ ಫೈನಾನ್ಸ್‌ನ ಪ್ರಬಂಧಕ ಪ್ರದೀಪ್, ಹಿರಿಯ ವಿದ್ಯಾರ್ಥಿ ದೆಹಲಿ ಟಾಟಾ ಕನ್ಸಲ್ಟೆನ್ಸಿಯ ಪ್ರಾಜೆಕ್ಟ್ ಮ್ಯಾನೇಜರ್ ಮಧು, ಹಿರಿಯ ವಿದ್ಯಾರ್ಥಿ ಸಿಸ್ಕೋ ಸಿಸ್ಟಮ್ ಟೆಕ್ನಿಕಲ್ ಪ್ರಾಜೆಕ್ಟ್ ಇಂಜಿನಿಯರ್ ಸುಮ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಡಿ.21ರಂದು ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರು ಪ್ರಾಂತ್ಯದ ಬೆಥನಿ ಶಿಕ್ಷಣ ಮಂಡಳಿಯ ಕಾರ್ಪೋರೇಟ್ ಮ್ಯಾನೇಜರ್ ಭಗಿನಿ ಸಿಸಿಲಿಯಾ ಮೆಂಡೊನ್ಸಾ, ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ಲಾರೆನ್ಸ್ ಮಸ್ಕರೇನಸ್, ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ, ರೈ ಎಸ್ಟೇಟ್& ಎಜ್ಯುಕೇಶನಲ್ ಟ್ರಸ್ಟ್‌ನ ಪ್ರವರ್ತಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಉದ್ಯಮಿ, ಪದ್ಮಶ್ರೀ ಗ್ರೂಪ್ಸ್‌ನ ಮ್ಹಾಲಕ ಸೀತಾರಾಮ ರೈ ಕೆದಂಬಾಡಿ, ಹಿರಿಯ ವಿದ್ಯಾರ್ಥಿ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಹಿರಿಯ ವಿದ್ಯಾರ್ಥಿ, ಅಮೇರಿಕಾದ ಕ್ಯಾಲಿಪೋರ್ನಿಯಾ ಪ್ರಿನ್ಸಿಪಾಲ್ ಇನ್ಫೋಸೆಟಕ್ ಅಡ್ವೈಸರ್ ರಾಮಚಂದ್ರ ಶೆಣೈ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.