ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ದ. 22 ರಂದು ಬೆಳಿಗ್ಗೆ 9.30 ರಿಂದ ವಿದ್ಯಾಚೇತನ ಅಡಿಟೋರಿಯಂನಲ್ಲಿ ಸನ್ಮಾನ ರಶ್ಮಿ ಕಾರ್‍ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಕಡಬ ತಾ.ಪಂ, ಮುಖ್ಯಕಾರ್‍ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಗೌರವಾನ್ವಿತ ಅತಿಥಿಯಾಗಿ ವಿದ್ಯಾರಶ್ಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧ್ರುವ ಮುಂಡೋಡಿ ಭಾಗವಹಿಸಲಿದ್ದು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈಯವರು ಶುಭಾಶಂಶನೆಗೈಯಲಿದ್ದಾರೆ.
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿರವರು ಅಧ್ಯಕ್ಷತೆ ವಹಿಸಲಿದ್ದಾರೆ. ದ. 23 ರಂದು ಸಂಜೆ 5.30 ರಿಂದ ಸಂಭ್ರಮ ರಶ್ಮಿ( ವಾರ್ಷಿಕೋತ್ಸವ ದಿನ) ಜರಗಲಿದ್ದು, ಮುಖ್ಯ ಅತಿಥಿಯಾಗಿ ಜಿ.ಪಂ, ಮುಖ್ಯ ಕಾರ್‍ಯದರ್ಶಿ ಡಾ.ಕುಮಾರ್, ಗೌರವಾನ್ವಿತ ಅತಿಥಿಯಾಗಿ ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಡಾ.ವೀರಯ್ಯ ಹಿರೇಮಠ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಪೇರಾಲುರವರು ಭಾಗವಹಿಸಲಿದ್ದಾರೆ.
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈಯವರು ಶುಭಾಂಶನೆಗೈಯಲಿದ್ದಾರೆ, ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ವಹಿಸಲಿದ್ದಾರೆ. ಸಭಾ ಕಾರ್‍ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್‍ಯಕ್ರಮಗಳು ನಡೆಯಲಿದೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರುರವರು ತಿಳಿಸಿದ್ದಾರೆ.
ದ. 23 -ಹಿರಿಯ ವಿದ್ಯಾರ್ಥಿಗಳ ಸಮಾವೇಶ
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ದ. 23 ರಂದು ಅಪರಾಹ್ನ 3 ರಿಂದ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಲಿದ್ದು, ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ
ಸವಣೂರು ಕೆ.ಸೀತಾರಾಮ ರೈ
ಸಂಚಾಲಕರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು