ಪುತ್ತೂರು; ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಕೆಪಿಸಿಸಿ ಸಂಯೋಜಕರಾಗಿರುವ ಕಾವು ಹೇಮನಾಥ ಶೆಟ್ಟಿಯವರ 58 ನೇ ಹುಟ್ಟು ಹಬ್ಬ ನಡೆಯಲಿದ್ದು ಇದರ ಪ್ರಯುಕ್ತ ಪುತ್ತೂರು ವಿಧಾನಸಭಾ ಕ್ಷೇತ್ರದ 57 ಮಂದಿ ಹಿರಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸನ್ಮಾನ ನಡೆಯಲಿದೆ ಎಂದು ಹೇಮನಾಥ ಶೆಟ್ಟಿ ಅಭಿಮಾನಿಗಳ ಬಳಗದ ಮುಖಂಡರು ಮಾಹಿತಿ ನೀಡಿದ್ದಾರೆ.
ಬಂಟರಯಾನೆ ನಾಡವರ ಮಾತೃಸಂಘದ ಉಪಾಧ್ಯಕ್ಷರಾಗಿರುವ ಕಾವು ಹೇಮನಾಥ ಶೆಟ್ಟಿ ಪುತ್ತೂರಿನ ಶ್ರೀರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾಗಿ, ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ, ಕಾವು ಸರಕಾರಿ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಸರಕಾರಿ ಶಾಲೆಯನ್ನು ಜಿಲ್ಲೆಯಲ್ಲೇ ಮಾದರಿ ಶಾಲೆಯನ್ನಾಗಿ ರೂಪಿಸಿದ ಕೀರ್ತಿ ಸಲ್ಲುತ್ತದೆ. ಡಿ.21 ರಂದು 58 ನೇ ಹುಟ್ಟುಹಬ್ಬವನ್ನು ಆಚರಿಸಲಿದ್ದು ಇದರ ಪ್ರಯುಕ್ತ ಪುತ್ತೂರು ವಿಧಾನಸಭಾ ಕ್ಷೇತ್ರದ 57 ಮಂದಿ ಹಿರಿಯ ಕಾರ್ಯಕರ್ತರಿಗೆ ಸನ್ಮಾನ ನಡೆಯಲಿದೆ.
ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿ ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯರನ್ನು ಈ ಸಂದರ್ಭದಲ್ಲಿ ಗುರುತಿಸಿ ಗೌರವಿಸುವ ಕಾರ್ಯ ನಡೆಯಲಿದೆ. ಹೇಮನಾಥ ಶೆಟ್ಟಿಯವರು ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು ಈಗಾಗಲೇ ಅರ್ಜಿಯನ್ನು ಸಲ್ಲಿಸಿದ್ದು ಅವರಿಗೆ ಈ ಬಾರಿ ಅವಕಾಶ ಒದಗಿಬರಲಿದೆ ಎಂದು ಅಭಿಮಾನಿ ಬಳಗ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.