ಚೀನಾದಲ್ಲಿ ಕೋವಿಡ್ ಪ್ರಕರಣ ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಪೂರ್ವ ಸಿದ್ಧತಾ ಕ್ರಮಗಳನ್ನು ಆರಂಭಿಸಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್-19 ಮಾರ್ಗಸೂಚಿಯನ್ನು ಅನುಸರಿಸಬೇಕು ಅಥವಾ ದೇಶದ ಹಿತದೃಷ್ಟಿಯಿಂದ ಯಾತ್ರೆಯನ್ನು ರದ್ದುಗೊಳಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ಟ್ವೀಟ್ ಮಾಡಿದೆ. ದೇಶದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಡಲು ಆರೋಗ್ಯ ಸಚಿವರು ತಜ್ಞರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.