ಮುಂಡೂರು ಉದಯಗಿರಿ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಕಚೇರಿ ಉದ್ಘಾಟನೆ, ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ

0

ಪುತ್ತೂರು: ಮುಂಡೂರು ಗ್ರಾಮದ ಅಜಲಾಡಿ ಉದಯಗಿರಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಿ.30ರಿಂದ ಜ.3 ರ ತನಕ ನಡೆಯಲಿರುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಒತ್ತೆಕೋಲಕ್ಕೆ ಪೂರ್ವಭಾವಿಯಾಗಿ ಆಡಳಿತ ಕಚೇರಿ ಉದ್ಘಾಟನೆ ಹಾಗೂ ಚಪ್ಪರ ಮುಹೂರ್ತ ಡಿ.23ರಂದು ನೆರವೇರಿತು.

ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಕಚೇರಿಯನ್ನು ಉದ್ಯಮಿಗಳು, ಎಪಿಎಂಸಿ ಮಾಜಿ ಸದಸ್ಯೆಯಾಗಿರುವ ತ್ರಿವೇಣಿ ಪೆರ್ವೋಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಉರಿನ ಹಿರಿಯರ ಮಾರ್ಗದರ್ಶನ, ಯುವಕರು ಒಗ್ಗಟ್ಟಿನ ಪರಿಶ್ರಮದ ಫಲವಾಗಿ ಎಲ್ಲಾ ಕಾರ್ಯಗಳು ಯಶಸ್ವಿಯಾಗಿ ನಡೆಯುತ್ತಿದೆ.

ಇದರ ಫಲವಾಗಿ ಕಡಿಮೆ ಅವಧಿಯಲ್ಲಿ ಜೀರ್ಣೋದ್ಧಾರ ಕಾಮಗಾರಿಗಳು ಉತ್ತಮ ರೀತಿಯಲ್ಲಿ ನಡೆದುಬಂದಿದ್ದು ಬ್ರಹ್ಮಕಲಶೋತ್ಸವದಲ್ಲಿಯೂ ಯಶಸ್ವಿಯಾಗಿ ನಡೆಸುವಂತೆ ಅವರು ತಿಳಿಸಿದರು.

ಚಪ್ಪರ ಮುಹೂರ್ತ ನೆರವೇರಿಸಿದ ಉದ್ಯಮಿಗಳು, ಸಂಪ್ಯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಭೀಮಯ್ಯ ಭಟ್ ಮಾತನಾಡಿ, ಪ್ರತಿಯೊಬ್ಬರ ಶ್ರಮದ ಫಲವಾಗಿ ಬಹಳಷ್ಟು ವೇಗವಾಗಿ ನಡೆದುಬಂದಿದೆ. ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

ಜೀರ್ಣೋದ್ಧಾರ ಹಾಗು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಹಾಗೂ ಅಭಿವೃದ್ಧಿ ಸಮಿತಿ ಅಧ್ಯಕ್ಷ ಭಾಸ್ಕರ ಆಚಾರ್ ಹಿಂದಾರ್ ಮಾತನಾಡಿ, ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರುವಲ್ಲಿ ಪ್ರತಿಯೊಬ್ಬರೂ ಸಹಕರಿಸುವಂತೆ ಮನವಿ ಮಾಡಿದರು. ಮುಂಡೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ನಡುಬೈಲು, ದೈವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಸದಾಶಿವ ಶೆಟ್ಟಿ ಪಟ್ಟೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಗಣೇಶ್ ಸುವರ್ಣ ಬೊಲ್ಲಗುಡ್ಡೆ, ಕೋಶಾಧಿಕಾರಿ ಅನಿಲ್ ಕಣ್ಣಾರ್ನೂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಸ್ವಾಗತಿಸಿದರು. ಕೆ.ಹುಕ್ರ ಮಾಸ್ಟರ್ ವಂದಿಸಿದರು.

LEAVE A REPLY

Please enter your comment!
Please enter your name here