ಸ್ಥಳೀಯ ಸಂಸ್ಥೆ ಸ್ವತ್ತು: ಇ-ಆಸ್ತಿ ತಂತ್ರಾಂಶಕ್ಕೆ ಸಂಪುಟ ಅನುಮೋದನೆ

0

ಪುತ್ತೂರು:2017 ಕ್ಕೂ ಮುನ್ನ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಿಂದ ಹೊರಗಿದ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿಗಳ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ದಾಖಲಿಸಿ, ಇ-ಖಾತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ದ.23 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ,ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಿದ ನಂತರ ಅವುಗಳ ಇ-ಸ್ವತ್ತು ತಂತ್ರಾಂಶದಡಿಯಲ್ಲಿ ನಿರ್ವಹಿಸಿದ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ದಾಖಲಿಸಲು ಅವಕಾಶ ನೀಡಲು ಸಂಪುಟದಲ್ಲಿ ನಿರ್ಣಯಿಸಲಾಯಿತು.ಇದರಿಂದ ರಾಜ್ಯದ ಒಟ್ಟು 302 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 175ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತೆ ನೀಡಿಕೆಗೆ ಇದ್ದ ಅಡೆತಡೆಗಳು ಬಗೆಹರಿಯಲಿವೆ.ಉಳಿದ ನಗರ ಸ್ಥಳೀಯ ಸಂಸ್ಥೆಗಳು ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಇ-ಖಾತೆ ಸಮಸ್ಯೆಗಳು ಬಗೆಹರಿಯಲು ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳ್ಳುವವರೆಗೆ ಕಾಯಬೇಕಾಗುತ್ತದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here