ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನ ವಾರ್ಷಿಕ ಕ್ರೀಡಾಕೂಟ ನಡೆಯಿತು. ವಿದ್ಯಾರ್ಥಿಗಳ ಪಥಸಂಚಲನದ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಸದಸ್ಯ ಈಶ್ವರ ಚಂದ್ರ ಡಿ.ಯನ್. ಕ್ರೀಡಾಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಕ್ರೀಡೆಯಿಂದ ನಮ್ಮ ಮನಸ್ಸು ಹಾಗೂ ಶರೀರ ಎರಡಕ್ಕೂ ವ್ಯಾಯಾಮ ಸಿಗುತ್ತದೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲೂ ಕ್ರೀಡೆಗೆ ಬಹಳ ಪ್ರೋತ್ಸಾಹ ಸಿಗುತ್ತಿದೆ. ಇಂದು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲೂ ಭಾಗವಹಿಸುವಂತಾಗಲಿ ಎಂದು ಶುಭಹಾರೈಸಿದರು.
ವಿವೇಕಾನಂದ ಪಾಲಿಟೆಕ್ನಿಕ್ನ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕ ಮಹಾದೇವ ಶಾಸ್ತ್ರಿ ಹಾಗೂ ಖಜಾಂಜಿ ನರಸಿಂಹ ಪೈ ಉಪಸ್ಥಿತರಿದ್ದರು.
ಪ್ರಾಂಶುಪಾಲ ಚಂದ್ರಕುಮಾರ್ ಶುಭಹಾರೈಸಿದರು. ಕಾಲೇಜಿನ ಶಿಕ್ಷಕ ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ಶ್ರೀಮಾನಸ ತಂಡದವರು ಪ್ರಾರ್ಥಿಸಿದರು, ವಿದ್ಯಾರ್ಥಿ ನಾಯಕ ಅಸ್ಮಿತ್ ಭಾರ್ಯ ಸ್ವಾಗತಿಸಿದರು, ಕೀಡಾ ಕಾರ್ಯದರ್ಶಿ ಆಶ್ರಯ್ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದ ಪ್ರತಿಜ್ಞಾ ವಿಧಿ ಬೋಧಿಸಿದರು.ವಿದ್ಯಾರ್ಥಿನಿ ನಾಯಕಿ ಚೈಶ್ಮ ವಂದಿಸಿದರು. ಕಾನೂನು ಮಹಾವಿದ್ಯಾಲಯದ ದೈಹಿಕ ಶಿಕ್ಷಕ ನವೀನ್ ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕ್ರೀಡಾ ಸಹಾಯ ನಿರ್ದೇಶಕ ಅನಿಲ್ ಸಹಕರಿಸಿದರು.