ಪುತ್ತೂರು: ಪುತ್ತೂರಿನಲ್ಲಿ ನೂತನವಾಗಿ ಕಾರ್ಯಾಚರಿಸಲಿರುವ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಮಂಜುಳಾಶ್ರೀ ಶೆಣೈ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮಂಗಳೂರಿನಲ್ಲಿರುವ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಪ್ರಸ್ತುತ ಪುತ್ತೂರಿನಲ್ಲಿ ಪ್ರಾರಂಭಗೊಂಡಿರುವ ಕಛೇರಿಯ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಸದ್ಯ ಪುತ್ತೂರು ತಾಲೂಕು ಪಂಚಾಯತ್ ಕಛೇರಿಯಲ್ಲಿ ಮೀನುಗಾರಿಕಾ ಇಲಾಖೆ ಕಾರ್ಯ ನಿರ್ವಹಿಸಲಿದೆ.