ಪುತ್ತೂರು: 2023ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆಯಾಗಿದ್ದಾರೆ. ಎನ್ಎಸ್ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ. ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಯ ಪುತ್ರಿಯಾಗಿದ್ದು, ಪ್ರಸ್ತುತ ಎ.ಜೆ ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿರುತ್ತಾರೆ. ಇತ್ತೀಚೆಗೆ ನಡೆದ ಪದವಿಪ್ರದಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಈ ಸಾಲಿನಲ್ಲಿ ಆರು ವಿಷಯಗಳಲ್ಲಿ ರ್ಯಾಂಕ್ ಪಡೆದಿರುತ್ತಾರೆ.