ಪುತ್ತೂರು: ಭಜನೆ ಮತ್ತು ಭಜಕರ ಕುರಿತು ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ತರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಪೋಸ್ಟ್‌ಗಳನ್ನು ಹಾಕುತ್ತಿರುವ ಕೊಯ್ಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಇನ್ನೂ ಬಂಧಿಸಿಲ್ಲ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳದದಿಂದ ಡಿ.29 ರಂದು ಪುತ್ತೂರು ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ಬಳಿಕಯ ಪೊಲೀಸರು ಪ್ರತಿಭಟನಾ ನಿರತ ಕಾರ್ಯಕರ್ತರಿಗೆ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕುರಿತು ಮಾಹಿತಿ ಕಾರ್ಯಕ್ರಮ ನೀಡಿದರು.
ಪುತ್ತೂರು ನಗರ ಪೊಲೀಸ್ ಠಾಣೆ ನಿರೀಕ್ಷಕ ಸುನಿಲ್ ಕುಮಾರ್, ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಅಪರಾಧ ತಡೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಹಿಂದು ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರು ಕೂಡಾ ಕೆಲವೊಂದು ಸಲಹೆ ನೀಡಿದರು.