ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನ ನಿಗದಿತ ಸಮಯಕ್ಕಿಂತ ಒಂದು ದಿನ ಮುಂಚಿತವಾಗಿ ಸಮಾಪನಗೊಳ್ಳಲಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದು ಇಂದು ಅಧಿವೇಶನಕ್ಕೆ ತೆರೆಬೀಳಲಿದೆ. ಡಿ.30ರ ವರೆಗೆ ಅಧಿವೇಶನ ನಡೆಯಬೇಕಾಗಿತ್ತು. ಆದರೆ ಅನ್ಯ ಕಾರ್ಯನಿಮಿತ್ತ ಸದಸ್ಯರ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಇಂದು ಗುರುವಾರ ಕಲಾಪ ಕೊನೆಗೊಳ್ಳಲಿದೆ. ಹಿರಿಯ ಸದಸ್ಯರ ಜೊತೆ ಚರ್ಚಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ಕಾಗೇರಿ ತಿಳಿಸಿದ್ದಾರೆ. ಆದರೆ ರಾಜ್ಯಕ್ಕೆ ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ಹಿನ್ನಲೆಯಲ್ಲಿ ಕಲಾಪವನ್ನು ಬಲಿ ಕೊಡಲಾಗಿದೆ ಎಂದು ವಿಪಕ್ಷ ನಾಯಕರು ಟೀಕಿಸಿದ್ದಾರೆ.