ಪುತ್ತೂರು: ಪಡುವನ್ನೂರು ಗ್ರಾಮದ ಸುಳ್ಯಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಡಿ.29ರಂದು ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಉಬ್ಬು ಛಾಯಾಚಿತ್ರದ ಪುನಃ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ಗಣಪತಿ ಹೋಮ, ಭಜನೆ, ಮಧ್ಯಾಹ್ನ ಶ್ರೀ ಅಯ್ಯಪ್ಪ ಸ್ವಾಮಿ ಉಬ್ಬು ಛಾಯಾಚಿತ್ರದ ಪುನಃ ಪ್ರತಿಷ್ಠಾ ಕಾರ್ಯಕ್ರಮ, ಮಹಾಪೂಜೆ, ನಿತ್ಯನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಕೃಷ್ಣಕಿಶೋರ್ ಪೆರ್ಮುಖ ಮತ್ತು ಬಳಗದವರಿಂದ ಭಕ್ತಿ ಗಾನ ರಸಮಂಜರಿ, ಸಂಜೆ ದುರ್ಗಾಪೂಜೆ, ರಾತ್ರಿ ಭರತನಾಟ್ಯ ಕಾರ್ಯಕ್ರಮ, ರಾತ್ರಿ 10ರಿಂದ ಅಮ್ಮ ಕಲಾವಿದೆರ್ ಕುಡ್ಲ ಅಭಿನಯಿಸುವ ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಾರಥ್ಯ ಮತ್ತು ರಚನೆಯ ಕುಸಲ್ದರಸೆ ನವೀನ್ ಡಿ.ಪಡೀಲ್ ಸಲಹೆ ಸಹಕಾರದೊಂದಿಗೆ ಸುಂದರ್ ರೈ ಮಂದಾರ ನಿರ್ದೇಶಿಸಿ ಅಭಿನಯಿಸುವ ‘ಅಲೇ ಬುಡಿಯೆರ್’ಗೆ ತುಳು ಹಾಸ್ಯ ನಾಟಕ ನಡೆಯಿತು.
ಇಂದು ಅರ್ಧಏಕಾಹ ಭಜನೆ, ಮಂಗಲೋತ್ಸವ : ಡಿ.30ರಂದು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ತಂಡಗಳಿಂದ ಅರ್ಧಏಕಾಹ ಭಜನೆ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ಪಾಲೆಕೊಂಬು ಮೆರವಣಿಗೆ, ಭಜನಾ ಮಂಗಲೋತ್ಸವ, ದೀಪೋತ್ಸವ, ಶರಣಂ ಘೋಷ, ಅಪ್ಪ ಸೇವೆ ನಡೆಯಲಿದೆ. ರಾತ್ರಿ 10.30ರಿಂದ ಮಲ್ಲ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ. ಡಿ.೩೧ರಂದು ಬೆಳಿಗ್ಗೆ 4ರಿಂದ ಅಯ್ಯಪ್ಪ ವೃತಾಧಾರಿಗಳಿಂದ ಕೆಂಡಸೇವೆ, ಪ್ರಸಾದ ವಿತರಣೆ ನಡೆಯಲಿದೆ.