ಒಳ್ಳೆಯ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು- ಪಿ.ಜಿ.ಜಗನ್ನಿವಾಸ ರಾವ್
ಮೂಲಭೂತ ಸೌಕರ್ಯಗಳಲ್ಲಿ ರಕ್ಷಣೆಗೂ ಆದ್ಯತೆ – ಸುನಿಲ್ ಕುಮಾರ್
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಸ್ಟೂಡೆಂಟ್ ಪೊಲೀಸ್ ಕೆಡೆಟ್ಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಡಿ.31ರಂದು ನಡೆಯಿತು.
ಶಾಲಾ ಅಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಪಿ.ಜಿ ಜಗನ್ನಿ ವಾಸ ರಾವ್ ಉದ್ಘಾಟಿಸಿ ಮಾತನಾಡಿ ನಮ್ಮ ಕೊಂಬೆಟ್ಟು ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸ್ಟೂಡೆಂಟ್ ಪೊಲೀಸ್ ಕೆಡೆಟ್ಸ್ 2016ರಲ್ಲಿ ಆರಂಭಗೊಂಡಿತು. ಮಕ್ಕಳಲ್ಲಿ ಆರೋಗ್ಯ ಮತ್ತು ದೈಹಿಕ ಸಾಮರ್ಥ್ಯವನ್ನು ಉತ್ತಮಗೊಳಿಸಲು ಹಾಗೂ ಒಳ್ಳೆಯ ಸಮಾಜವನ್ನು ನಿರ್ಮಾಣ ಮಾಡಲು ಇದೊಂದು ವೇದಿಕೆಯಾಗಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ನಗರ ಠಾಣೆಯ ಪೊಲೀಸ್ ಠಾಣೆ ನಿರೀಕ್ಷಕ ಸುನಿಲ್ ಕುಮಾರ್ ಎಂಎಸ್ ರವರು ಮಾತನಾಡಿ ಮೂಲಭೂತ ಸೌಕರ್ಯಗಳಲ್ಲಿ ರಕ್ಷಣೆಗೆ ಬಹಳ ಆದ್ಯತೆ ನೀಡಲಾಗಿದೆ. ಇದರಲ್ಲಿ ಪೊಲೀಸ್ ಇಲಾಖೆಯು ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಜನರಿಗೆ ಕಾನೂನು ಅರಿವು ಮೂಡಿಸುವುದು, ಸಾಮಾಜಿಕ ಅನಿಷ್ಟಗಳನ್ನು ಹೋಗಲಾಡಿಸಿ ಉತ್ತಮ ಸಮಾಜ ನಿರ್ಮಾಣ ಮಾಡುವುದು ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರಕಾರವು ಶಾಲೆಗಳಲ್ಲಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ಸ್ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದರು.
ಅತಿಥಿಗಳಾದ ಪೊಲೀಸ್ ಎಸ್ .ಐ ಶ್ರೀಕಾಂತ್ ರಾಥೋಡ್ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಏಎಸ್ಐ ಶ್ರೀಧರ್ , ಡ್ರಿಲ್ ಆಫೀಸರ್ ಭೀಮ್ ಸೇನ್, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಎನ್. ಎಸ್ ಭಟ್ , ಸವಿತಾ ದೇವಿ, ವಿಲ್ಮಾ ಶೋಭ ಉಪಸ್ಥಿತರಿದ್ದರು. ಸಂಸ್ಥೆಯ ಉಪಪ್ರಾಂಶುಪಾಲ ವಸಂತ ಮೂಲ್ಯರವರು ಸ್ವಾಗತಿಸಿದರು. ಜಾನೆಟ್ ಪಾಯಸ್ ವಂದಿಸಿದರು. ವಿದ್ಯಾರ್ಥಿನಿ ಶ್ರೀಕೃಪ ಪ್ರಾರ್ಥಿಸಿದರು. ಚಿತ್ರಕಲಾ ಶಿಕ್ಷಕ ಜಗನ್ನಾಥ ಅರಿಯಡ್ಕ ಕಾರ್ಯಕ್ರಮ ನಿರೂಪಿಸಿದರು.