ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನ

0

ಮಾಧ್ಯಮದಿಂದ ಜನ ಸಾಮಾನ್ಯರ-ಸರಕಾರದ ಮಧ್ಯೆ ಸೇತುವೆಯಾಗಿ ಕೆಲಸ; ಪ್ರಕಾಶ್ ಶೆಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ’ಜಿಲ್ಲಾ ಸಮ್ಮೇಳನ-2023’ ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷ ಸದಾಶಿವ ಶೆಣೈಯವರ ಸಮ್ಮೇಳನಾಧ್ಯಕ್ಷತೆಯಲ್ಲಿ ಜ.3ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಿತು.

ಬೆಳಿಗ್ಗೆ ಎಂಆರ್‌ಜಿ ಗ್ರೂಪ್ ಬೆಂಗಳೂರು ಇದರ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರು ಸಮ್ಮೇಳನ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆ ಶ್ರೇಷ್ಠವಾದದ್ದು. ಜನ ಸಾಮಾನ್ಯರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ ಮಾಡುತ್ತಿವೆ ಎಂದರು. ಸಂಸದ ನಳಿನ್‌ಕುಮಾರ್ ಕಟೀಲ್‌ರವರು, ಪತ್ರಕರ್ತರ ಕ್ಷೇಮ ನಿಧಿಗೆ ಚಾಲನೆ ನೀಡಿ, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ’ಭಾವ ಚಿತ್ರ ಯಾನ -2’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿ, ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಜೊತೆ ಮಾತನಾಡಿ ಪತ್ರಕರ್ತರಿಗೆ ನಿವೇಶನ ಒದಗಿಸಲು ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು. ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೆನಪಿನ ಸಂಚಿಕೆ ’ಮಾಧ್ಯಮ’ವನ್ನು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ. ಖಾದರ್ ಬಿಡುಗಡೆಗೊಳಿಸಿದರು.

ಪತ್ರಕರ್ತ ವಿಕ್ರಂ ಕಾಂತಿಕೆರೆಯವರ ಕೃತಿ ’ಕಾವೇರಿ ತೀರದ ಪಯಣ’ ಕೃತಿಯನ್ನು ಶಾಸಕ ವೇದವ್ಯಾಸ ಕಾಮತ್‌ರವರು ಬಿಡುಗಡೆ ಮಾಡಿದರು. ಛಾಯಾಚಿತ್ರ ಪ್ರದರ್ಶನವನ್ನು ಶಾಸಕ ಡಾ. ವೈ.ಭರತ್ ಶೆಟ್ಟಿ ಉದ್ಘಾಟಿಸಿದರು. ಬಿಜೈ-ಕಾಪಿಕಾಡ್ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಪರಿಕರಗಳನ್ನು ಉದ್ಯಮಿ ಸಾಂಬ ಶಿವರಾವ್ ವಿತರಣೆ ಮಾಡಿದರು. ಪತ್ರಕರ್ತರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪಟ್ಲ ಫೌಂಡೇಷನ್‌ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಚಾಲನೆ ನೀಡಿದರು. ಪರಿಸರ ಸ್ನೇಹಿ ಯೋಜನೆಗೆ ಗುರ್ಮೆ ಫೌಂಡೇಶನ್‌ನ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಶುಭ ಹಾರೈಸಿದರು. ಮಂಗಳೂರು ಮೇಯರ್ ಜಯಾನಂದ ಅಂಚನ್, ಮಂಗಳೂರು ವಿವಿ ಉಪಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ, ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಮುಖ್ಯಸ್ಥ ಗಾಯತ್ರಿ, ಕೆಐಒಸಿಎಲ್‌ನ ನಿರ್ದೇಶಕ ಮುರುಗೇಶ್, ಮುಂಬೈ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ರವೀಂದ್ರ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆರಿಫ್ ಪಡುಬಿದ್ರೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ರಾಷ್ಟ್ರೀಯ ಪತ್ರಿಕಾ ಮಂಡಳಿ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನೆಗೆ ಮುನ್ನ ಆಕರ್ಷಕ ಮೆರವಣಿಗೆಯ ಮೂಲಕ ಅತಿಥಿಗಳನ್ನು ವೇದಿಕೆಗೆ ಕರೆ ತರಲಾಯಿತು. ಪತ್ರಿಕೆ, ಮ್ಯಾಗಜಿನ್ ಲೋಗೋ, ವಿವಿಧ ಧರ್ಮಗಳ ಗ್ರಂಥಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆಯಲ್ಲಿ ತರಲಾಯಿತು. ಚೆಂಡೆ, ವಾದ್ಯ, ಮೇಳಗಳು ಮೆರವಣಿಗೆಗೆ ಸಾಥ್ ನೀಡಿತು.

ವಿಚಾರಗೋಷ್ಠಿ: ಉದ್ಘಾಟನೆ ಬಳಿಕ ನಡೆದ ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮ ಕುರಿತ ವಿಚಾರಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಅನಿಲ್ ಶಾಸಿ ವಿಷಯ ಮಂಡಿಸಿದರು. ಒಶಿಯನ್ ಪರ್ಲ್ ಉಪಾಧ್ಯಕ್ಷ ಗಿರೀಶ್ ಮುಖ್ಯ ಅತಿಥಿಯಾಗಿದ್ದರು, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಸಮನ್ವಯಕಾರರಾಗಿದ್ದರು. ಬಳಿಕ ಮ್ಯಾಜಿಶಿಯನ್ ರಾಜೇಶ್ ಮಳಿ, ಬಳಗದಿಂದ ಮ್ಯಾಜಿಕ್ ಪ್ರದರ್ಶನ, ವಿವಿಧ ತಾಲೂಕುಗಳ ಪತ್ರಕರ್ತರ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಮಾರೋಪ: ಸಂಜೆ ನಡೆದ ಸಮಾರೋಪದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಸಮಾರೋಪ ಭಾಷಣ ಮಾಡಿದರು. ದ.ಕ.ಜಿ.ಪಂ. ಸಿಇಒ ಡಾ.ಕುಮಾರ್‌ರವರು ಹಿರಿಯ ಪತ್ರಕರ್ತರನ್ನು ಸನ್ಮಾನಿಸಿದರು. ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಸಮ್ಮೇಳನ ಅಧ್ಯಕ್ಷ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಸಂದರ್ಭೋಚಿತವಾಗಿ ಮಾತನಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಎಂಆರ್‌ಪಿಎಲ್ ಪಿಆರ್‌ಒ ರುಡಾಲ್ ನರೋನ್ಹಾ, ಅದಾನಿ ಗ್ರೂಪ್‌ನ ಕಿಶೋರ್ ಆಳ್ವ, ದ.ಕ. ಎಸ್ಪಿ ಋಷಿಕೇಶ್ ಸೋನೆವಾಣೆ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ.ಹರಿಪ್ರಸಾದ್ ರೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿದ್ದರು.

ಪುತ್ತೂರು, ಕಡಬ ತಾಲೂಕು ಪತ್ರಕರ್ತರಿಗೆ ಸನ್ಮಾನ

ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಿಗೆ ಸನ್ಮಾನ, ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದು ಹಿರಿಯ ಪತ್ರಕರ್ತರಾಗಿರುವ ಶೇಖ್ ಜೈನುದ್ದೀನ್, ಐ.ಬಿ.ಸಂದೀಪ್ ಕುಮಾರ್‌ರನ್ನು ಸನ್ಮಾನಿಸಲಾಯಿತು. ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಸಿದ್ದಿಕ್ ನೀರಾಜೆಯವರನ್ನು ಅಭಿನಂದಿಸಲಾಯಿತು. ಈ ವೇಳೆ ಸಂಘದ ಸದಸ್ಯರಾದ ಸರ್ವೇಶ್ ಕುಮಾರ್, ನಝೀರ್ ಕೊಯಿಲ ಉಪಸ್ಥಿತರಿದ್ದರು. ಕಡಬ ತಾಲೂಕು ಘಟಕದ ಅಧ್ಯಕ್ಷ ಎನ್.ಕೆ. ನಾಗರಾಜ್‌ರನ್ನು ಅಭಿನಂದಿಸಲಾಯಿತು. ಈ ವೇಳೆ ಸಂಘದ ಸದಸ್ಯರಾದ ಬಾಲಕೃಷ್ಣ ಕೊಯಿಲ, ತಸ್ಲೀಮ್, ದಯಾನಂದ ಕಲ್ನಾರ್, ಸ್ವಾತಿ ಬಾಳ್ತಿಲ್ಲಾಯ, ಲೋಕೇಶ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತ ದ.ಕ ಜಿಲ್ಲಾ ಕಾರ್ಯನಿರತ ಪರ್ತಕರ್ತ ಸಂಘದ ಕೋಶಾಧಿಕಾರಿಯಾಗಿರುವ ಕೊಯಿಲದ ಪುಷ್ಪರಾಜ್ ಬಿ.ಎನ್‌ರವರನ್ನು ಸನ್ಮಾನಿಸಲಾಯಿತು. ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

LEAVE A REPLY

Please enter your comment!
Please enter your name here