ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಶುಭ ಸುದ್ದಿ

0

ಖಾಸಗಿ ಅನುದಾನ ರಹಿತ ಶಾಲೆಗಳು ರಾಜ್ಯ ಸರಕಾರ ನಿಗದಿ ಪಡಿಸಿದ ರೀತಿಯ ಹೊರತುಪಡಿಸಿ ಇತರ ಕಾರಣಗಳಿಗೆ ಶುಲ್ಕ ಪಡೆಯುವುದನ್ನು ನಿಷೇದಿಸುವ ಕರ್ನಾಟಕ ಶಿಕ್ಷಣ ಕಾಯಿದೆ 1983 ರ ಸೆಕ್ಷನ್ 48 ನ್ನು ಹೈ ಕೋರ್ಟ್ ಅಸಂವಿಧಾನಿಕ ಎಂದು ಹೇಳಿದೆ. ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಮತ್ತು ಮತ್ತಿತರ ಶಾಲಾ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ ಎಸ್ ಇಂದಿರೇಶ್ ಅವರಿದ್ದ ನ್ಯಾಯ ಪೀಠ ಈ ಆದೇಶ ಪ್ರಕಟಿಸಿದೆ. ಇದರಿಂದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ವಿಧಿಸುವ ಶುಲ್ಕ ನಿಯಂತ್ರಿಸಲು ಸರಕಾರಕ್ಕೆ ಇದ್ದ ಅಧಿಕಾರ ಕಳೆದುಕೊಂಡಂತಾಗಿದೆ.

LEAVE A REPLY

Please enter your comment!
Please enter your name here